Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ಹತ್ಯೆಗೀಡಾದ ಕಾರ್ತಿಕ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಭೇಟಿ….

ಪುತ್ತೂರು : ಕಳೆದ ಸೆಪ್ಟಂಬರ್ 3ರಂದು ರಾತ್ರಿ ಸಂಪ್ಯ ಪೊಲೀಸ್ ಠಾಣೆಯ ಎದುರು ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಆರ್ಯಾಪು ಗ್ರಾಮದ ಮೇರ್ಲ ನಿವಾಸಿ, ಹಿಂದೂ ಜಾಗರಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿದ್ದ ಕಾರ್ತಿಕ್ ಸುವರ್ಣ ಅವರ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಹತ್ಯೆ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಸಂಜೀವ ಮಠಂದೂರು ಅವರೊಂದಿಗೆ ಗೃಹಸಚಿವರನ್ನು ಭೇಟಿಯಾಗಿ ಈಗಾಗಲೇ ಒತ್ತಾಯಿಸಲಾಗಿದೆ ಎಂದ ಅವರು ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಒದಗಿಸುವ ಕುರಿತು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮೃತನ ಕುಟುಂಬದವರು ಕಾರ್ತಿಕ್ ಸುವರ್ಣ ಅವರ ಸಹೋದರ ದಿಲೀಪ್ ಅವರಿಗೆ ಪುತ್ತೂರಿನಲ್ಲಿ ಖಾಸಗಿ ಉದ್ಯೋಗ ಕಲ್ಪಿಸಿಕೊಡುವಂತೆ ಬೇಡಿಕೆ ಇಟ್ಟರು. ಈ ಕುರಿತು ಕ್ರಮಕೈಗೊಳ್ಳುವುದಾಗಿ ನಳಿನ್‍ಕುಮಾರ್ ಅವರು ಭರವಸೆ ನೀಡಿದರು.
ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ, ತಾಪಂ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಾಮ್‍ದಾಸ್ ಹಾರಾಡಿ, ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನ್ಮಯ ರೈ, ತಾಲೂಕು ಕಾರ್ಯದರ್ಶಿ ಅವಿನಾಶ್ ಪುರುಷರಕಟ್ಟೆ, ನಗರ ಕಾರ್ಯದರ್ಶಿ ದಿನೇಶ್ ಪಂಜಿಗ, ಬಜರಂಗದಳ ದಕ್ಷಿಣಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ, ತಾಲೂಕು ಪ್ರಧಾನ ಕಾರ್ಯದರ್ಶಿ ಜಯಂತ ಕುಂಜೂರುಪಂಜ, ಧನಂಜಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button