ಸುದ್ದಿ

ಹೆಡ್‌ ಕಾನ್‌ಸ್ಟೇಬಲ್ ಶಿವರಾಮ್ ನಿಧನ….

ಪುತ್ತೂರು: ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಆಗಿರುವ ಶಿವರಾಮ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತ: ಮಂಡ್ಯ ನಿವಾಸಿಯಾಗಿರುವ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಲ್ಲಿ ವಾಸ್ತವ್ಯ ಹೊಂದಿರುವ ಶಿವರಾಮ್ ಅವರು ಕಳೆದ 2 ವರ್ಷಗಳಿಂದ ಪುತ್ತೂರು ನಗರ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶಿವರಾಮ್ ಅವರು ಪುತ್ತೂರು ನಗರ ಠಾಣೆ ಸೇರಿಂದತೆ ಕಡಬ, ಬಂಟ್ವಾಳ, ವೇಣೂರು, ಪೂಂಜಾಲ್‌ಕಟ್ಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Related Articles

Leave a Reply

Your email address will not be published.

Back to top button