ಅಮೆರಿಕಾ ಮತ್ತು ಭಾರತ – 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದ…..

ದೆಹಲಿ:ಭಾರತ ಹಾಗೂ ಅಮೆರಿಕಾ ನಡುವೆ ಮೂರು ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದ ಸೇರಿದಂತೆ ಇತರ ಪ್ರಮುಖ ಮೂರು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಈ ಒಪ್ಪಂದಗಳ ಕುರಿತು ಮಾಹಿತಿ ನೀಡಿದರು.

ವಿಶ್ವದ ಅತ್ಯಾಧುನಿಕ ಅಪಾಚಿ ಎಂಹೆಚ್-60 ಹೆಲಿಕಾಪ್ಟರ್ ಖರೀದಿಗೆ ಭಾರತ ಒಪ್ಪಂದ ಮಾಡಿಕೊಂಡಿದೆ.ಇದರಿಂದಾಗಿ ಭಾರತೀಯ ಸೇನೆಗೆ ನೂರಾನೆ ಬಲ ಬಂದಂತಾಗಿದೆ. ಇದಲ್ಲದೇ ಮಾನಸಿಕ ಆರೋಗ್ಯ ಕುರಿತ ದ್ವೀಪಕ್ಷಿಯ ಒಪ್ಪಂದ, ಆರೋಗ್ಯ ಉಪಕರಣಗಳ ರಕ್ಷಣೆ ಹಾಗೂ ತೈಲಕ್ಷೇತ್ರದಲ್ಲಿ ಸಹಕಾರ ಕುರಿತ ದ್ವಿಪಕ್ಷೀಯ ಒಪ್ಪಂದವೇರ್ಪಟ್ಟಿದೆ.
ಪಾಕಿಸ್ತಾನದಿಂದ ಉಂಟಾಗುತ್ತಿರುವ ಇಸ್ಲಾಮಿಕ್ ಭಯೋತ್ಪಾದನೆಯನ್ನು ನಿಯಂತ್ರಿಸಲು ಉಭಯ ದೇಶಗಳು ಜಂಟಿ ಹೋರಾಟ ನಡೆಸಲು ಮಾತುಕತೆ ನಡೆಸಲಾಗಿದೆ. ವ್ಯಾಪಾರಕ್ಕೆ ಸಂಬಂಧಿಸಿದಂತೆಯೂ ಚರ್ಚೆ ನಡೆಸಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ರಕ್ಷಣೆ ಮತ್ತು ಭದ್ರತೆ, ಇಂಧನ ಕ್ಷೇತ್ರಗಳಲ್ಲಿ ಸಹಭಾಗಿತ್ವ, ವ್ಯಾಪಾರ ಮತ್ತಿತರ ಅಮೆರಿಕಾ- ಭಾರತ ಸಹಭಾಗಿತ್ವದ ಪ್ರತಿಯೊಂದು ಅಂಶದ ಬಗ್ಗೆ ಚರ್ಚೆ ನಡೆಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಉಭಯ ದೇಶಗಳ ನಡುವಿನ ರಕ್ಷಣಾ ಒಪ್ಪಂದ ಬಲಪಡಿಸುವಿಕೆ ಪ್ರಮುಖವಾದ ಅಂಶವಾಗಿದೆ ಎಂದು ಅವರು ತಿಳಿಸಿದರು.
ಭಯೋತ್ಪಾದಕತೆ ಬೆಂಬಲಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಭಾರತ- ಅಮೆರಿಕಾ ಚರ್ಚೆ ನಡೆಸಿರುವುದಾಗಿ ಹೇಳಿದ ನರೇಂದ್ರ ಮೋದಿ, ಮುಕ್ತ, ಪಾರದರ್ಶಕ ವ್ಯಾಪಾರಕ್ಕೆ ಒಪ್ಪಂದ, ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಒಪ್ಪಂದ ಸೇರಿದಂತೆ ಹಲವು ಒಪ್ಪಂದವೇರ್ಪಟ್ಟಿದ್ದು, ಅಮೆರಿಕ- ಭಾರತದ ಸಂಬಂಧ ಹೊಸ ಘಟ್ಟ ತಲುಪಿದೆ ಎಂದು ಹೇಳಿದರು.

Sponsors

Related Articles

Leave a Reply

Your email address will not be published. Required fields are marked *

Back to top button