ಎನ್‌ಆರ್‌ಸಿ, ಸಿಎಎ ವಿರುದ್ಧ ಜ.15ರಂದು ಅಡ್ಯಾರಿನಲ್ಲಿ ಬೃಹತ್ ಪ್ರತಿಭಟನೆ…

ಮಂಗಳೂರು: ಎನ್‌ಆರ್‌ಸಿ, ಸಿಎಎ ವಿರುದ್ಧ ಜ.15ರಂದು ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ‌ ಮುಹಮ್ಮದ್ ‌ಮಸೂದ್ ನಗರದ ಖಾಸಗಿ‌ ಹೊಟೇಲ್ ನಲ್ಲಿ ಕರೆದ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದ್ದಾರೆ.
ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಸುಮಾರು 1 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದರು. ಉಭಯ ಜಿಲ್ಲೆಯ ಸಮಾನ‌ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಸಮಾವೇಶದಲ್ಲಿ ‘ನಾವು ಭಾರತೀಯರು ತಂಡ’ದ ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ, ಮಾನವ ಹಕ್ಕುಗಳ ಹೋರಾಟಗಾರ ಶಿವಸುಂದರ್, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.

ಸುದ್ದಿಗೋಷ್ಢಿಯಲ್ಲಿ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಇಬ್ರಾಹಿಂ ಕೋಡಿಜಾಲ್, ಬಿಎಂ ಮುಮ್ತಾಝ್ ಅಲಿ, ಸೈಯದ್ ಅಹ್ಮದ್ ಬಾಷಾ ತಂಙಳ್, ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಸಮಾವೇಶದ ಸಂಯೋಜಕ ಮನ್ಸೂರ್ ಅಹ್ಮದ್ ಅಝಾದ್ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button