ಕೇಂದ್ರದ ವಿರುದ್ಧ ಮಾತನಾಡುವವರು ದೇಶ ವಿರೋಧಿಗಳು-ಸಂಜೀವ ಮಠಂದೂರು…..
ಮಂಗಳೂರು:ದ.ಕ. ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು ಹಾಸ್ಯಾಸ್ಪದ. ಸೆಂಥಿಲ್ ಯಾಕೆ ರಾಜೀನಾಮೆ ನೀಡಿದ್ದಾರೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಕೇಂದ್ರದ ವಿರುದ್ಧ ಯಾರೇ ಮಾತನಾಡಿದರೂ ಅವರು ದೇಶ ವಿರೋಧಿಗಳು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸುದ್ದಿಗೋಷ್ಟಿ ಯಲ್ಲಿ ಹೇಳಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಿ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮುಂತಾದ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಸೆಂಥಿಲ್ ಹೇಳಿದ್ದಾರೆ. ಅವರು ತಮ್ಮ ಅಧಿಕಾರಾವಧಿಯಲ್ಲಿ ಯಾವೆಲ್ಲ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂದು ತನಿಖೆಯಾಗಬೇಕೆಂದು ಅವರು ಆಗ್ರಹಿಸಿದ್ದಾರೆ.