ಕೊರೋನಾ -ದೇಶದಲ್ಲಿ ಮತ್ತೆ ಮೂವರು ಬಲಿ, ಸಾವಿನ ಸಂಖ್ಯೆ 48, ಸೋಂಕಿತರ ಸಂಖ್ಯೆ 1400…

ನವದೆಹಲಿ: ಮಂಗಳವಾರ ಕೇರಳ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೊರೋನಾದಿಂದಾಗಿ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿದ್ದು, ದೇಶದಲ್ಲಿ ಇದುವರೆಗೆ 1400 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ಆಗಿದೆ. ಕೇರಳದಲ್ಲಿ 68 ವರ್ಷದ ವ್ಯಕ್ತಿಯೊಬ್ಬರು ಕೊರೋನಾಗೆ ಬಲಿಯಾಗಿದ್ದು, ಭಾನುವಾರವಷ್ಟೇ ಇವರಲ್ಲಿ ವೈರಸ್ ದೃಢಪಟ್ಟಿತ್ತು. ಇವರ ಸಾವಿನೊಂದಿಗೆ ಕೇರಳ ರಾಜ್ಯದಲ್ಲಿ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಮಧ್ಯಪ್ರದೇಶದಲ್ಲಿ ವೈರಸ್’ಗೆ ಓರ್ವ ವ್ಯಕ್ತಿ ಇಂದೋರ್ ನಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ಮಧ್ಯಪ್ರದೇಶದಲ್ಲಿ ವೈರಸ್’ಗೆ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿಯೂ ಸೋಮವಾರ ರಾತ್ರಿ ವೈರಸ್ ಪೀಡಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹೌರಾ ಜಿಲ್ಲೆ ನಿವಾಸಿಯಾಗಿದ್ದ 40 ವರ್ಷದ ಮಹಿಳೆ ವೈರಸ್’ಗೆ ಬಲಿಯಾಗಿದ್ದು, ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಈ ವರೆಗೂ ಸೋಂಕಿಗೆ ಮೂವರು ಬಲಿಯಾಗಿದ್ದಾರೆಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Sponsors

Related Articles

Leave a Reply

Your email address will not be published. Required fields are marked *

Back to top button