ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಪದವಿ ಪ್ರದಾನ ಸಮಾರಂಭ…

ಮೂಡುಬಿದ್ರಿ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2022 – 23 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಆ.26 ರಂದು ನಡೆಯಿತು.

ನೊವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಸಹಸ್ಥಾಪಕ ಮೊಹಮ್ಮದ್ ಹನೀಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಇಂಜಿನಿಯರಿಂಗ್ ಅಂದರೆ ಹೊಂದಿಕೊಳ್ಳುವಿಕೆ. ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆವಿಷ್ಕಾರ ಮತ್ತು ನಾವೀನ್ಯತೆಯೊಂದಿಗೆ ಪರಿಹಾರ ಕಂಡುಕೊಳ್ಳಬೇಕು. ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಬೇಕು. ಸಹಯೋಗ ಮತ್ತು ತಂಡದ ಮೂಲಕ ಕೆಲಸ ಮಾಡುವುದರಿಂದ ಯಶಸ್ಸು ಗಳಿಸಬಹುದು ಎಂದರು. ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ವಿಶೇಷವಾದ ಕೊಡುಗೆ ನೀಡಬೇಕು. ಇಂಜಿನಿಯರಿಂಗ್ ಪದವೀಧರರು ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹತ್ತರ ಜವಾಬ್ದಾರಿ ಹೊಂದಬೇಕು. ದೊಡ್ಡ ಕನಸು ಕಾಣುವುದರೊಂದಿಗೆ ಕಠಿಣ ಪರಿಶ್ರಮ ಹಾಗೂ ವಿನಯತೆಯನ್ನು ರೂಡಿಸಿಕೊಳ್ಳುವಂತೆ ಸೂಚಿಸಿದರು. ಒಳ್ಳೆಯ ಯೋಚನೆ, ಕಲ್ಪನೆ ಇದ್ದರೆ ಅವಕಾಶಗಳು ತನ್ನಿಂತಾನೇ ದೊರೆಯುತ್ತದೆ ಎಂದ ಅವರು ಉದ್ಯೋಗ ಹುಡುಕುವ ಬದಲು ಇತರರಿಗೆ ಉದ್ಯೋಗ ನೀಡುವಂತವರಾಗಬೇಕು ಎಂದರು.

ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಯೆನೆಪೋಯ ಆಬ್ದುಲ್ಲ ಕು೦ಞ ಅವರು ಅಧ್ಯಕ್ಷತೆ ವಹಿಸಿ, ಪದವಿ ಗಳಿಸುವುದು ಮುಂದಿನ ಉತ್ತಮ ಭವಿಷ್ಯದ ಮೆಟ್ಟಿಲು. ಜ್ಞಾನವು ಶಕ್ತಿಯ ಸಂಪತ್ತು. ಜ್ಞಾನ ಸಂಪಾದನೆ ಪದವಿ ಗಳಿಸುವುದರೊಂದಿಗೆ ಕೊನೆಗೊಳ್ಳುವುದಿಲ್ಲ. ಜೀವನದಲ್ಲಿ ಕಲಿಕೆಯು ನಿರಂರತ ಪ್ರಕ್ರಿಯೆ. ಹೊಸ ಹೊಸ ವಿಷಯಗಳನ್ನು ಕಲಿತು ಅವಕಾಶಗಳನ್ನು ಅನ್ವೇಷಿಸಬೇಕು. ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಯೊಂದಿಗೆ ಕೆಲಸ ನಿರ್ವಹಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದರು. ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲಿತ ಎಲ್ಲರೂ ಹೆಮ್ಮೆ ಪಡುವಂತ ಸಾಧನೆ ಮಾಡಬೇಕು ಎಂದ ಅವರು ಪದವೀಧರರ ಯಶಸ್ಸಿಗಾಗಿ ಶುಭ ಹಾರೈಸಿದರು.

ಯೆನೆಪೋಯ ಗ್ರೂಪ್ ನ ಕಾರ್ಯಾಚರಣೆಗಳ ನಿರ್ದೇಶಕರಾದ ಯೆನೆಪೋಯ ಅಬ್ದುಲ್ಲಾ ಜಾವೇದ್ , ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್ ನ ಟ್ರಸ್ಟೀ ರಾಮಚಂದ್ರ ಶೆಟ್ಟಿ, ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್ ನ ಕಾರ್ಯದರ್ಶಿ,ಯೆನೆಪೋಯ ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಅಖ್ತರ್ ಹುಸೇನ್, ಎಲ್ಲ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಸ್ವಾಗತಿಸಿದರು ಮತ್ತು ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರೊ. ಸ್ಮಿತಾ ಅತಿಥಿಗಳ ಪರಿಚಯ ಮಾಡಿದರು. ಅಮನ್ ಪ್ರಾರ್ಥಿಸಿದರು. ಪ್ರೊ. ರಾಜ್ ಕಿರಣ್ ಶೆಟ್ಟಿ ವಂದಿಸಿದರು. ಪ್ರೊ. ನಾಝಿಯಾ ಕಾರ್ಯಕ್ರಮ ನಿರೂಪಿಸಿದರು.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಸುಮಾರು 51 ವಿದ್ಯಾರ್ಥಿಗಳಿಗೆ , ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸುಮಾರು 48 ವಿದ್ಯಾರ್ಥಿಗಳಿಗೆ, ಕಂಪ್ಯೂಟರ್ ಸೈನ್ಸ್ ವಿಭಾಗದ ಸುಮಾರು 55 ವಿದ್ಯಾರ್ಥಿಗಳಿಗೆ, ಮಾಹಿತಿ ತಂತ್ರಜ್ಞಾನ ವಿಭಾಗದ ಸುಮಾರು 60 ವಿದ್ಯಾರ್ಥಿಗಳಿಗೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸುಮಾರು 86 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

whatsapp image 2023 08 26 at 1.34.58 pm
whatsapp image 2023 08 26 at 1.34.59 pm
whatsapp image 2023 08 26 at 1.35.00 pm
whatsapp image 2023 08 26 at 1.34.59 pm (1)
whatsapp image 2023 08 26 at 1.34.59 pm (2)
Sponsors

Related Articles

Back to top button