ಖೇಲೋ ಇಂಡಿಯಾ ಈಜು ಸ್ಪರ್ಧೆಯಲ್ಲಿ ಎರಡು ಬೆಳ್ಳಿಯ ಪದಕ….
ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಸುಹಾಸ್.ಪಿ.ಎಮ್ ಅಖಿಲ ಭಾರತ ಪ್ರಥಮ ಅಂತರ್ ವಿಶ್ವವಿದ್ಯಾನಿಲಯ ಖೇಲೋ ಇಂಡಿಯಾ ಈಜು ಸ್ಪರ್ಧೆಯಲ್ಲಿ ಎರಡು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ
ಒಡಿಶಾದ ಬುಬನೇಶ್ವರ್ ನಲ್ಲಿ ನಡೆದ ಈ ಸ್ಪರ್ಧೆಯ 400 ಮೀ ಫ್ರೀಸ್ಟೈಲ್ ಹಾಗೂ 200 ಮೀ ಬಟರ್ ಫ್ಲೈ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಎರಡೂ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಕಳೆದ ನವಂಬರ್ ತಿಂಗಳಲ್ಲಿ ಪಂಜಾಬಿನಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಈಜು ಸ್ಪರ್ಧೆಯಲ್ಲಿನ ಸಾಧನೆಯನ್ನು ಪರಿಗಣಿಸಿ ಅವರು ಈ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.
ಅವರ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುಹಾಸ್ ಅವರಿಗೆ ಪಾರ್ಥ ವಾರಣಾಸಿ ಹಾಗೂ ನಿರೂಪ್.ಜಿ.ಆರ್ ಅವರು ತರಬೇತಿ ನೀಡಿದ್ದು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.