ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಹಾಕಿ ತಂಡಕ್ಕೆ ದ್ವಿತೀಯ ಸ್ಥಾನ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗದ ಅಂತರ್ ಕಾಲೇಜು ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ನಿಟ್ಟೆಯ NMAMIT ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಈ ವಿಜಯದೊಂದಿಗೆ ತಂಡವು ಫೆಬ್ರವರಿ 23 ಮತ್ತು 24 ರಂದು CIT ಪೊನ್ನಂಪೇಟೆಯಲ್ಲಿ ನಡೆಯುವ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಅರ್ಹತೆಯನ್ನು ಗಳಿಸಿಕೊಂಡಿದೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಈ ತಂಡಕ್ಕೆ ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button