ಗ್ರಾಮ ಪಂಚಾಯತ್ ಮಟ್ಟದಲ್ಲೇ ಸಿಎಎ ಕುರಿತು ಗೊಂದಲ ನಿವಾರಿಸಲಿ: ಯು.ಟಿ.ಖಾದರ್….
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದೇಶದಲ್ಲಿ ಈಗ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಲಿ. ಪ್ರತಿ ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗೃಹಸಚಿವರು ಗೊಂದಲ ನಿವಾರಿಸಲಿ. ಮುಖ್ಯಮಂತ್ರಿಗಳು ರಾಜ್ಯದ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅವರು ಜ.16 ರಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮನೆ ಮನೆಯಲ್ಲಿ ಆಶಾ ಕಾರ್ಯಕರ್ತೆಯರು ಹೋದಾಗ ಗೊಂದಲ ಸೃಷ್ಟಿಯಾಗುತ್ತಿದೆ. ಜನರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಗೊಂದಲ ಸೃಷ್ಟಿಯಾಗಿದೆ. ಸರ್ಕಾರ, ಆಡಳಿತ ಮಂಡಳಿಗಳು, ಪತ್ರಕರ್ತರು ಅರಿವು ಮೂಡಿಸಬೇಕಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲೇ ಈ ಜಾಗೃತಿ ನಡೆಯಬೇಕಾಗಿದೆ ಎಂದರು.