ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ- ಕಲೋತ್ಸವ ಕಲರವ 2019 ….
ಬಂಟ್ವಾಳ: ಜಿಲ್ಲಾ ಮಟ್ಟದ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯುವುದರಿಂದ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳು ಮಕ್ಕಳ ಪ್ರತಿಭೆಗಳನ್ನು ಗುರುತಿಸುವುದಕ್ಕೆ ಸಹಕಾರಿಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಇವರ ಆಶ್ರಯದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019 ನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಜಿ.ಪಂ ಸದಸ್ಯರಾದ ಮಂಜುಳಾ ಮಾಧವ ಮಾವೆ , ಮೀನಾಕ್ಷಿ ಪೂಜಾರಿ ಗೋಳ್ತಮಜಲು , ಎಮ್.ಎಸ್ ಮಹಮ್ಮದ್ ಕೊಳ್ನಾಡು, ತಾ.ಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಧನಲಕ್ಷೀ ಸಿ. ಬಂಗೇರ, ತಾ.ಪಂ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಗ್ರಾ.ಪಂ ಅಧ್ಯಕ್ಷೆ ಮಮತಾ ಶೆಟ್ಟಿ, ಬಾಲವಿಕಾಸ ಆಂಗ್ಲ ಮಾಧ್ಯಮಾ ಶಾಲೆಯ ಸಂಚಾಲಕ ಜೆ. ಪ್ರಹ್ಲಾದ ಶೆಟ್ಟ್ಟಿ, ಅಧ್ಯಕ್ಷ ಬಿ.ಎಸ್.ನಾಯ್ಕ್, ಕಾರ್ಯದರ್ಶೀ ನಾರಾಯಣ ಶೆಟ್ಟಿ ಕೊಂಬಿಲ, ಆಡಳಿತಾಧಿಕಾರಿ ಶ್ರೀಧರ್ ಉಪಸ್ಥಿತರಿದ್ದರು.
ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯ ಅಧಿಕಾರಿ ಪ್ರತಿಭಾ, ನೋಡೆಲ್ ಅಧಿಕಾರಿ ಶೋಭ ಎನ್., ತಾಲೂಕು ನೋಡಲ್ ಅಧಿಕಾರಿ ಸುಶೀಲ, ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಉಪಾಧ್ಯಕ್ಷ ರಾಮಕೃಷ್ಣ ಶಿರೂರು, ವಿವಿಧ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳಾದ ಚೆನ್ನಕೇಶವ, ಶಿವಪ್ರಸಾದ್ ಶೆಟ್ಟಿ, ಗಣೇಶ್, ಜತ್ತಪ್ಪ ಗೌಡ, ಜೋಯಲ್ ಲೋಬೋ, ರಮಾನಂದ, ಮುರಳಿ ಕೃಷ್ಣ ,ಚಿನ್ನಪ್ಪ ಜಾಲ್ಸೂರು, ಜಯರಾಮ, ಸುಬ್ರಾಯ ಕಾರಂತ್ ಮೊದಲಾದವರು ವೇದಿಕೆಯಲ್ಲಿದ್ದರು. ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಗ್ರೇಸ್ ಪಿ. ಸಲ್ಡಾನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪಾಲ್ಗೊಂಡಿದ್ದರು.
ಮಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ಉಪನಿರ್ಧೇಶಕ ವಾಲ್ಟರ್ ಹೆಚ್ ಡಿಮೆಲ್ಲೋ ಸ್ವಾಗತಿಸಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಮ್.ಪಿ ವಂದಿಸಿದರು. ಶಿಕ್ಷಕಿಯರಾದ ಸುಧಾ ಜಯಶ್ರೀ ಆಚಾರ್ಯ , ರಶ್ಮಿ ಫೆರ್ನಾಂಡಿಸ್ ನಿರೂಪಿಸಿದರು. ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ 2000 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ನಡೆಯುವ 70 ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.
ಸಭಾ ಕಾರ್ಯಕ್ರಮಕ್ಕೆ ಮೊದಲು ಮಾಣಿ ಗಾಂಧಿ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದವರೆಗೆ ಮೆರವಣಿಗೆ ನಡೆಯಿತು. ಸ್ವಚ್ಛ ಭಾರತದ ಜಾಗೃತಿ ,ದೇಶಿಯ ಉಡುಪುಗಳ ವೈವಿಧ್ಯತೆ ,ಕಲ್ಲಡ್ಕ ಗೊಂಬೆಬಳಗ,ರಾಷ್ಟ್ರೀಯ ಭಾವೈಕ್ಯತೆ , ರೈತ , ಯಕ್ಷಗಾನ ವೇಷಗಳು, ಸೌಟ್ಸ್ ಗೈಡ್ಸ್ ವಿದ್ಯಾರ್ಥಿಗಳ ತಂಡ , ಚೆಂಡೆ ವಾದನ, ಹುಲಿವೇಶಧಾರಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ರಂಗು ನೀಡಿದರು.