ಜಿಲ್ಲಾ ಮಟ್ಟದ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳ ಕ್ರೀಡಾಕೂಟ…..

ಪುತ್ತೂರು: ವಿಶೇಷ ಅಗತ್ಯವುಳ್ಳ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಅವರಲ್ಲಿ ಅತ್ಮವಿಶ್ವಾಸ ಬೆಳೆಯಲು ಸಹಕಾರಿಯಾಗುತ್ತದೆ. ಇತರ ಕ್ಷೇತ್ರಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೆಲವೊಮ್ಮೆ ವಿಶೇಷ ಚೇತನದ ಮಕ್ಕಳಿಗೆ ಸಾದ್ಯವಿಲ್ಲ. ಅವರನ್ನು ಇತರ ಸಮಾನ್ಯ ಮಕ್ಕಳಂತೆ ನೋಡುವ ಮನಸ್ಸು ನಮ್ಮದಾಗಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.
ಅವರು ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಧ್ವಜಾರೋಹಣ ನೆರವೇರಿಸಿದ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ವಿಶೇಷ ಚೇತನವುಳ್ಳ ವಿದ್ಯಾರ್ಥಿಗಳ ಮೇಲೆ ಕರುಣೆ ಬೇಡ. ಅವರಿಗೆ ಸರಕಾರದಿಂದ ದೊರೆಯಬೇಕಾದ ಸವಲತ್ತುಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶ್ರಮಿಸಬೇಕಾಗಿದೆ. ಪ್ರತಿಯೊಬ್ಬರು ಸಾಮಾಜಿಕ ಚಂತನೆಯಿಂದ ಕೆಲಸ ಮಾಡಿದಾಗ ಸಾರ್ಥಕತೆ ಪಡೆಯಲು ಸಾಧ್ಯವಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ, ಸಾಮಾನ್ಯ ಮಕ್ಕಳಂತೆ ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಪ್ರೀತಿಯಿಂದ ಸಲಹಬೇಕು. ಅವರ ಮನಸ್ಸಿಗೂ ನೋವಾಗಂದತೆ ಸಲಹಿ ಪ್ರೋತ್ಸಾಹ ನೀಡಿದಾಗ ಅವರು ಸಂತೋಷದಿಂದ ಜೀವಿಸಲು ಸಹಕಾರಿ. ವಿಶೇಷ ಅಗತ್ಯವುಳ್ಳ ಮಕ್ಕಳಿಗೂ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಇಲಾಖೆ ಉತ್ತಮ ವೇದಿಕೆ ಒದಗಿಸಿದೆ. ಇದನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳವಂತೆ ತಿಳಿಸಿದರು.
ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಸಭಾ ಸದಸ್ಯ ಜಗನ್ನಿವಾಸ ರಾವ್, ರೋಟರಿ ಕ್ಲಬ್ ಪುತ್ತೂರು ಪೂರ್ವದ ಅಧ್ಯಕ್ಷ, ಡಾ.ಶ್ಯಾಮ್ ಪ್ರಸಾದ್, ಎಸ್‍ಆರ್‍ಕೆ ಲ್ಯಾಡರ್ಸ್‍ನ ಮ್ಹಾಲಕ ಕೇಶವ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಘನಾಥ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಜಯರಾಮ ಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಮೋನಪ್ಪ ಪೂಜಾರಿ, ಅಕ್ಷರದಾಸೋಹದ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ತಾಲೂಕು ಸಮಿತಿ ಅಧ್ಯಕ್ಷ ಕುಮಾರ್, ರಾಜ್ಯಪ್ರತಿನಿಧಿ ಸಹದೇವ, ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ, ಗ್ರೇಡ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ರೈ, ಗ್ರೇಡ್2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸ್ವಾಗತಿಸಿದರು. ಸಮಗ್ರ ಶಿಕ್ಷಣ ಅಭಿಯಾನದ ಜಿಲ್ಲಾ ಉಪ ಸಮನ್ವಯಾಧಿಕಾರಿ ಮಂಜುಳಾ ಪ್ರಸ್ತಾವಿಕವಾಗಿ ಮತನಾಡಿದರು. ಕಡಬ ಸೈಂಟ್ ಆನ್ಸ್ ಶಾಲಾ ಕ್ರೀಡಾಪಟು ಜೆಪಿನ್ ಹ್ಯಾರಿ ವಿನ್ನಿ ಪ್ರತಿಜ್ಞಾವಿಧಿ ಬೋಧಿಸಿದರು. ನೆಟ್ಟಣಿಗೆ ಮುಡ್ನೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದೇವಿಪ್ರಸಾಸ್ ಕಾರ್ಯಕ್ರಮ ನಿರೂಪಿಸಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ವಂದಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button