ಡಿಕೆಶಿ ಬಂಧನ ದ್ವೇಷ ರಾಜಕಾರಣದ ಪ್ರತೀಕ:ಸುಳ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಹೇಳಿಕೆ…..
ಸುಳ್ಯ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಬಂಧನ ದ್ವೇಷ ರಾಜಕಾರಣದ ಪ್ರತೀಕ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಬಿಜೆಪಿಯವರು ಯಾವುದೇ ಅಕ್ರಮ ನಡೆಸಿದರೂ ಏನೂ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದ ಅವರು ಕಾಂಗ್ರೆಸ್ ನ ಬಹು ಪ್ರಭಾವಿ ನಾಯಕ ಎಂಬ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರವೀಣಾ ರೈ, ತಿರುಮಲೇಶ್ವರಿ ಅಡ್ಕಾರು, ಶ್ರೀಲತಾ ಪ್ರಸನ್ನ, ಮೋಹಿನಿ ಪೆಲತ್ತಡ್ಕ ಉಪಸ್ಥಿತರಿದ್ದರು.