ದ.ಕ – ಇಂದು ಎಲ್ಲಾ ಕೊರೊನ ಪರೀಕ್ಷಾ ವರದಿಗಳು ನೆಗೆಟಿವ್….

ಮಂಗಳೂರು: ಇಂದು ಲಭ್ಯವಾದ ಎಲ್ಲಾ 101 ಕೊರೊನ ಪರೀಕ್ಷಾ ವರದಿಗಳು ನೆಗೆಟಿವ್ ಆಗಿದೆ.
ಸೋಮವಾರದಂದು ಎರಡು ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇನ್ನು 297 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ. 536 ಮಂದಿಯ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 523 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಲ್ಲಿ 20 ಜನರು ಮರಣ ಹೊಂದಿದ್ದಾರೆ. 207 ಜನರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣ ದೃಢಪಟ್ಟಿರಲಿಲ್ಲ. ಆದರೆ ಇಂದು ಕಾಸರಗೋಡು ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣ ದಾಖಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button