ದ.ಕ – ಇಂದು ಎಲ್ಲಾ ಕೊರೊನ ಪ್ರಕರಣಗಳು ನೆಗೆಟಿವ್….

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಬುಧವಾರದಂದು ಎಲ್ಲಾ ಕೊರೊನ ಪರೀಕ್ಷಾ ವರದಿಗಳು ನೆಗೆಟಿವ್ ಆಗಿದೆ.ಇಂದು ಲಭ್ಯವಾದ 85 ಕೊರೊನ ಪರೀಕ್ಷಾ ವರದಿಗಳು ನೆಗೆಟಿವ್ ಆಗಿವೆ.
ಇನ್ನು 495 ಮಂದಿಯ ಪರೀಕ್ಷಾ ವರದಿ ಬರಬೇಕಾಗಿದೆ. ಇಂದು ಹನ್ನೊಂದು ಮಂದಿಯನ್ನು ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿಯ ತನಕ ಜಿಲ್ಲೆಯಲ್ಲಿ 12 ಮಂದಿ ಗುಣಮುಖರಾಗಿದ್ದು, ಮೂವರು ಸೋಂಕಿತರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನು 941 ಮಂದಿಯನ್ನು ಫಿವರ್ ಕ್ಲೀನಿಕ್ ಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಇಎಸ್ ಐ ಆಸ್ಪತ್ರೆಯಲ್ಲಿ 10 ಮಂದಿ ಕ್ವಾರಂಟೈನ್ ನಲ್ಲಿದ್ದಾರೆ. 10 ಮಂದಿ ಎನ್ಐಟಿಕೆಯಲ್ಲಿ ಬುಧವಾರದಂದು ದಾಖಲಾಗಿದ್ದು ಒಟ್ಟು 49 ಮಂದಿ ಎನ್ಐಟಿಕೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button