ದ.ಕ – ಕೊರೋನಗೆ ಬಂಟ್ವಾಳ ಮೂಲದ ಮಹಿಳೆ ಸಾವು…

ಮಂಗಳೂರು: ಕೊರೋನಾ ವೈರಸ್ ದ.ಕ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದ್ದು ಬಂಟ್ವಾಳದ ಸುಮಾರು 50 ವರ್ಷ ಪ್ರಾಯದ ಮಹಿಳೆ ರವಿವಾರ ಜಿಲ್ಲೆಯ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ವೈರಸ್ ಸೋಂಕಿಗೆ ಮೃತಪಟ್ಟಿದ್ದಾರೆ.
ಮಹಿಳೆ‌ಯನ್ನು ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅಲ್ಲಿಂದ ವೆನ್ಲಾಕ್‌ನಲ್ಲಿರುವ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು.ಗಂಟಲ ದ್ರವದ ಮಾದರಿಯನ್ನು ಶನಿವಾರವೇ ಪರೀಕ್ಷೆಗೆ ಕಳುಹಿಸಲಾಗಿದ್ದು ಭಾನುವಾರ ಬೆಳಿಗ್ಗೆ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ.
ಪರೀಕ್ಷಾ ವರದಿ ನಿರೀಕ್ಷೆಯಲ್ಲಿರುವಾಗಲೇ, ರೋಗಿಯು ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಿಗ್ಗೆ 9-15 ಗಂಟೆಗೆ ನಿಧನ ಹೊಂದಿರುತ್ತಾರೆ. ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿಯು ಅಪರಾಹ್ನ ಬಂದಿದ್ದು ರೋಗಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿರುತ್ತದೆ.

Sponsors

Related Articles

Leave a Reply

Your email address will not be published. Required fields are marked *

Back to top button