ಮಲಪ್ಪುರಂ ಜಿಲ್ಲೆಗೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ಟಿ. ಎಂ. ಶಹೀದ್ ತೆಕ್ಕಿಲ್…

ನವದೆಹಲಿ: ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಮುಗಿದಿದ್ದು ಪಕ್ಷದ ಸಾಂಸ್ಥಿಕ ಚುನಾವಣೆ ನಡೆಸುವ ಉದ್ದೇಶದಿಂದ ಬೂತ್ ಮಟ್ಟದಿಂದ 2750 ಬೂತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು, 110 ಮಂಡಲಂ ಸಮಿತಿ ಮತ್ತು ಪದಾಧಿಕಾರಿಗಳ , 32 ಬ್ಲಾಕ್ ಅಧ್ಯಕ್ಷರಗಳು ಮತ್ತು ಪದಾಧಿಕಾರಿಗಳ ಒಬ್ಬ ಜಿಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳ 32 ಕೆಪಿಸಿಸಿ ಸದಸ್ಯರುಗಳನ್ನು ಹಾಗು ಒಬ್ಬ ಎಐಸಿಸಿ ಸದಸ್ಯರನ್ನು 1,82,756 ಕಾಂಗ್ರೇಸ್ ಸಕ್ರಿಯ ಮತದಾರರಿಂದ ಚುನಾವಣೆ ಮುಖಾಂತರ ಹೆಚ್ಚು ಮತ ಪಡೆದವರನ್ನು ನೇಮಕ ಮಾಡಲು ಕೇರಳದ ಮಲಪ್ಪುರಂ ಜಿಲ್ಲೆಗೆ ಟಿ ಎಂ ಶಾಹೀದ್ ತೆಕ್ಕಿಲ್ ರವರನ್ನು
ನೇಮಿಸಿ ಎಐಸಿಸಿ ಯ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರಾದ ಮಧುಸೂದನ್ ಮಿಸ್ತ್ರಿ ಆದೇಶ ಮಾಡಿದ್ದಾರೆ.

ಶ್ರೀ ರಾಹುಲ್ ಗಾಂಧಿ ಸಹಿತ 3 ಲೋಕಸಭಾ ಸದಸ್ಯರ ಹಾಗೂ 16 ವಿಧಾನಸಭಾ ಕ್ಷೇತ್ರಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಮುಗಿದಿದ್ದು ಪಕ್ಷದ ಸಾಂಸ್ಥಿಕ ಚುನಾವಣೆ ನಡೆಸುವ ಉದ್ದೇಶದಿಂದ ಬೂತ್ ಮಟ್ಟದಿಂದ 2750 ಬೂತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು, 110 ಮಂಡಲಂ ಸಮಿತಿ ಮತ್ತು ಪದಾಧಿಕಾರಿಗಳ ಇರುವ ಅತ್ಯಂತ ದೊಡ್ಡ ಜಿಲ್ಲೆಯಾಗಿದೆ ಮಲಪ್ಪುರಂ. ಕೆಪಿಸಿಸಿಯ ಸದಸ್ಯತ್ವ ನೊಂದಣಿ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಗೆ ಕೆಪಿಸಿಸಿಯ ವೀಕ್ಷಕರಾಗಿ ಟಿ. ಎಂ. ಶಹೀದ್ ತೆಕ್ಕಿಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರು ನೇಮಕಗೊಳಿಸಿದ್ದರೂ ದಕ್ಷಿಣ ಕನ್ನಡದಲ್ಲಿ ಮುಖ್ಯ ನೋಂದಣಿದಾರರಲ್ಲಿ ಅತೀ ಹೆಚ್ಚು ಸದಸ್ಯರನ್ನು ನೊಂದಣಿ ಮಾಡಿಸಿದ್ದು ಟಿ. ಎಂ. ಶಹೀದ್ ತೆಕ್ಕಿಲ್.
ಟಿ. ಎಂ. ಶಹೀದ್ ತೆಕ್ಕಿಲ್ ಅವರು ಏನ್ ಎಸ್ ಯು ಐ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ , ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಯುವಕ ಕಾಂಗ್ರೆಸ್ಸಿನ ರಾಜ್ಯ ಕಾರ್ಯದರ್ಶಿಯಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ದಿನೇಶ ಗುಂಡೂರಾವ್ , ಸದಾನಂದ ಡಂಗಣ್ಣನವರ್, ಕೃಷ್ಣ ಬೈರೇ ಗೌಡ ರ ಅವಧಿಯಲ್ಲಿ ಯುವಕ ಕಾಂಗ್ರೇಸ್ ನಲ್ಲಿ ದುಡಿದು, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ.
ಎನ್ ಎಸ್ ಯು ಐ ಮತ್ತು ಯುವ ಕಾಂಗ್ರೇಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿ, ಹಾಸನ, ಉತ್ತರಕನ್ನಡ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ, ಮಡಿಕೇರಿ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಜಿಲ್ಲೆಗಳಲ್ಲಿ ನಡೆದ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಿರುತ್ತಾರೆ. ಕೆಪಿಸಿಸಿಯಿಂದ ಹಾವೇರಿ ಜಿಲ್ಲೆಯ ಹಿರೆಕೆರೂರು,ಬ್ಯಾಡಗಿ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವೀಕ್ಷಕರಾಗಿ ಸೇವೆಸಲ್ಲಿಸಿದ್ದು ,ವಿಧಾನ ಪರಿಷತ್ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ವೀಕ್ಷಕರಾಗಿ ದುಡಿದಿದ್ದರು ಕಳೆದ ಕೇರಳ ವಿಧಾನ ಸಭಾ ಚುನಾವಣೆಗೆ ಕ್ಯಾಲಿಕಟ್ ಜಿಲ್ಲೆಗೆ ಎಐಸಿಸಿ ವೀಕ್ಷಕರಾಗಿದ್ದರು.
ಟಿ. ಎಂ. ಶಹೀದ್ ರವರು ಎರಡು ಬಾರಿ ಸುಳ್ಯ ಕೆವಿಜಿ ಕಾನೂನು ಕಾಲೇಜಿನ ಮಂಗಳೂರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸೆನೆಟ್ ಆಯ್ಕೆ ಸಮಿತಿ ಸದಸ್ಯರಾಗಿ, ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿ ಯೂನಿಯನ್ ನ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ವಿಶ್ವವಿದ್ಯಾನಿಲಯ ¸ಸರ್ವ ಕಾಲೇಜು ವಿದ್ಯಾರ್ಥಿ ಯೂನಿಯನ್ ನ ಉಪಾಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವ ಶಕ್ತಿ ಮತ್ತು ಗ್ರಾಮೀಣಾಭಿವೃದ್ಧಿ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಸುಳ್ಯ ತಾಲೂಕು ಅಲ್ಪ ಸಂಖ್ಯಾತರ ವಿವಿದ್ದೋದ್ದೇಶ ಸಹಕಾರಿ ಸಂಘದಲ್ಲಿ ಏಳೂವರೆ ವರ್ಷಗಳ ಕಾಲ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ, ಪ್ರಸ್ತುತ ಕರ್ನಾಟಕ ರಾಜ್ಯದ ರಾಜೀವ್ ಯೂತ್ ಫೌಂಡೇಶನ್ ನ ಅಧ್ಯಕ್ಷರಾಗಿರುವ ಇವರು ಸಂಪಾಜೆ ಗ್ರಾಮದ ಪೇರಡ್ಕ- ಗೂನಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿ , ಪ್ರಸ್ತುತ ಗೌರವಾಧ್ಯಕ್ಷರಾಗಿ, ಅರಂತೋಡು ಬದ್ರಿಯಾ ಜುಮಾ ಮಸ್ಜಿದ್ ಪುನರ್ ನಿರ್ಮಾಣದ ಅಧ್ಯಕ್ಷ, ಅರಂತೋಡು ಅನ್ವಾರುಲ್ ಹುದಾ ಯುಂಗ್ ಮೆನ್ಸ್ ಸಂಸ್ಥೆಯ ಗೌರವಾಧ್ಯಕ್ಷರಾಗಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿ, ಗೂನಡ್ಕದಲ್ಲಿ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಕಳೆದ 3 ದಶಕಗಳಿಂದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಶಾಹಿದ್ ಗ್ರಾಮ ಮಟ್ಟದಿಂದ ತೊಡಗಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಪಕ್ಷದ ವಿವಿಧ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ.

Sponsors

Related Articles

Back to top button