ನಿಷೇಧಿತ ಪ್ಲಾಸ್ಟಿಕ್ ಬಳಕೆ- ಅಧಿಕಾರಿಗಳಿಂದ ದಾಳಿ….

ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರೂ, ಹಲವಾರು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದರಿಂದ ಮಹಾನಗರಪಾಲಿಕೆ ಅಧಿಕಾರಿಗಳು ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ, ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿರುವ ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ 9500 ರೂಪಾಯಿ ದಂಡ ವಿಧಿಸಿದ್ದಾರೆ.
ದಾಳಿಯಲ್ಲಿ ಆರೋಗ್ಯ ವಿಭಾಗದ ಪರಿಸರ ಅಭಿಯಂತರರಾದ ಶಬರಿನಾಥ್ ರೈ, ಆರೋಗ್ಯ ನಿರೀಕ್ಷಕರಾದ ಕರುಣಾಕರ್, ಭರತ್ ಕುಮಾರ್, ಯಶವಂತ್ ಕುಮಾರ್, ರಕ್ಷಿತಾ ಮುಂತಾದವರು ಭಾಗವಹಿಸಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button