ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆ – ಮೇ. 3 ರ ನಂತರ ನಿರ್ಧಾರ…..

ಬೆಂಗಳೂರು: ದೇಶಾದ್ಯಂತ ಲಾಕ್​ಡೌನ್​ ವಿಸ್ತರಣೆಯಾಗಿರೋದ್ರಿಂದ ರಾಜ್ಯದಲ್ಲಿ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಬಗ್ಗೆ ಯಾವುದೇ ನಿರ್ಧಾರಗಳು ಆದ್ರೂ ಮೇ 3ರ ಬಳಿಕವೇ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್‌ನ ಅಟ್ಟಹಾಸದ ಹಿನ್ನೆಲೆ ಮೇ 3ರವರೆಗೂ ಲಾಕ್‌ಡೌನ್ ಮುಂದುವರಿಕೆ ಮಾಡಲಾಗಿದೆ. ಇದರ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ. ನಮ್ಮ‌ ರಾಜ್ಯದಲ್ಲಿ ಕೂಡಾ ಮೇ 3 ರವರೆಗೂ ಲಾಕ್‌ಡೌನ್ ಮುಂದುವರಿಯಲಿದೆ. ಹೀಗಾಗಿ, ದ್ವಿತೀಯ ಪಿಯುಸಿಗೆ ಬಾಕಿಯಿರುವ ಒಂದು ಭಾಷೆಯ ಪರೀಕ್ಷೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿಚಾರಗಳನ್ನು ಮೇ 3 ರವರೆಗೂ ಮುಂದೂಡಲಾಗಿದೆ. ಪರೀಕ್ಷೆಯ ಬಗ್ಗೆ ಯಾವುದೇ ನಿರ್ಧಾರಗಳು ಆದ್ರೂ, ಅದು ಮೇ 3 ರ ಬಳಿಕವೇ. ಲಾಕ್‌ಡೌನ್ ವಿಸ್ತರಣೆಯಾದ ಹಿನ್ನೆಲೆ, ಪರೀಕ್ಷೆಯ ಬಗ್ಗೆ ಈಗ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸುರೇಶ್‌ಕುಮಾರ್ ಹೇಳಿದರು.

Sponsors

Related Articles

Leave a Reply

Your email address will not be published. Required fields are marked *

Back to top button