ಪುತ್ತೂರು ವಿರಾಟ್ ಭಜನೋತ್ಸವ-2020 ಸಮಾಲೋಚನಾ ಸಭೆ….

ಪುತ್ತೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಮುಂಬರುವ ಫೆ.8ರಂದು “ಪುತ್ತೂರು ವಿರಾಟ್ ಭಜನೋತ್ಸವ-2020” ಭಜನೋತ್ಸವ ಪುತ್ತೂರಿನಲ್ಲಿ ನಡೆಯಲಿದ್ದು, ಈ ಬಗ್ಗೆ ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ, ಪುತ್ತೂರು ತಾಲೂಕು ಭಜನಾ ಪರಿಷತ್ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈ ಭಜನೋತ್ಸವದ ಸಮಾಲೋಚನಾ ಸಭೆಯನ್ನು ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಗದ್ದೆಯಲ್ಲಿ ನಡೆಯುವುದು ದೇವರ ಸಂಕಲ್ಪವಾಗಿದೆ. ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲರೂ ಸಹಕರಿಸಬೇಕು. ಎಲ್ಲ ದೇವಸ್ಥಾನ, ದೈವಸ್ಥಾನ, ಭಜನಾ ಸಂಘಗಳು, ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಕಾರ್ಯದರ್ಶಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಪ್ತಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಮಟ್ಟದ ಭಜನಾ ಮಹೋತ್ಸವ ಪುತ್ತೂರಿನಲ್ಲಿ ನಡೆಯಬೇಕೆಂಬುದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯವಾಗಿದೆ. ಇದನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದರು.
ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷರಾದ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಎಸ್‍ಕೆಡಿಆರ್‍ಡಿಪಿ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಜನಾರ್ದನ್ ಎಸ್., ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಸುಬ್ಬಯ್ಯ ರೈ, ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ತಾಲೂಕು ಪ್ರಗತಿಬಂಧು ಒಕ್ಕೂಟಗಳ ಅಧ್ಯಕ್ಷ ರಾಮಣ್ಣ ಗೌಡ ಗುಂಡೋಲೆ, ಯೋಜನೆಯ ಮೇಲ್ವಿಚಾರಕಿ ಪಾವನಾ ಉಪಸ್ಥಿತರಿದ್ದರು.
ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರ್ವಹಿಸಿದರು.
ಈ ಸಂದರ್ಭದಲ್ಲಿ ವಿರಾಟ್ ಭಜನೋತ್ಸವ ಸಮಿತಿ ರಚಿಸಲಾಯಿತು. ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಗೌರವ ಮಾರ್ಗದರ್ಶಕರಾಗಿ, ಗೌರವಾಧ್ಯಕ್ಷರಾಗಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಲ್ಲಿಕಾ ಪ್ರಸಾದ್, ಅಧ್ಯಕ್ಷರಾಗಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಕಾರ್ಯಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿಗಳಾಗಿ ದೀಕ್ಷಿತ್ ಹೆಗ್ಡೆ, ಶಿವಪ್ರಸಾದ್, ಲೋಕೇಶ್ ಬೆತ್ತೋಡಿ ಅವರನ್ನು ಆರಿಸಲಾಯಿತು. ಗೌರವ ಸಲಹೆಗಾರರಾಗಿ ಸವಣೂರು ಸೀತಾರಾಮ ರೈ, ಜಯಂತ ನಡುಬೈಲ್, ಪದ್ಮನಾಭ ಶೆಟ್ಟಿ, ಎನ್.ಕೆ. ಜಗನ್ನಿವಾಸ ರಾವ್, ಪ್ರಸಾದ್ ಕೌಶಲ್ ಶೆಟ್ಟಿ, ಜಯಂತ್ ಪುರೋಳಿ, ಲೋಕೇಶ್ ಹೆಗ್ಡೆ, ರಾಮಕೃಷ್ಣ ಕಾಟುಕುಕ್ಕೆ, ಶಶಿಕುಮಾರ್ ರೈ ಬಾಲ್ಯೊಟ್ಟು, ಎನ್. ಸುಧಾಕರ ಶೆಟ್ಟಿ, ಅಶೋಕ್ ಕುಮಾರ್ ರೈ ಕೋಡಿಂಬಾಡಿ, ರಾಜದೀಪಕ್ ಜೈನ್, ಡಾ.ಪ್ರಸಾದ್ ಭಂಡಾರಿ, ಕೋಲ್ಪೆಗುತ್ತು ರಾಜಾರಾಂ ಶೆಟ್ಟಿ, ಶಶಿಧರ ರಾವ್ ಅವರನ್ನು ಆರಿಸಲಾಯಿತು. ಜಿಲ್ಲಾ ಸಂಚಾಲಕರಾಗಿ ಸಾಜ ರಾಧಾಕೃಷ್ಣ ಆಳ್ವಾ ಮತ್ತು ಸತೀಶ್ ಶೆಟ್ಟಿ, ಕೋಶಾಧಿಕಾರಿಯಾಗಿ ಚಂದ್ರನ್ ತಲಪಾಡಿ ಆಯ್ಕೆಯಾದರು. ಉಳಿದಂತೆ ಜತೆ ಕಾರ್ಯದರ್ಶಿಗಳು, ಉಪ ಸಮಿತಿ ಸಂಚಾಲಕರನ್ನು ನೇಮಿಸಲು ನಿರ್ಧರಿಸಲಾಯಿತು. ಸಮಿತಿಯ ಮುಂದಿನ ಸಭೆಯನ್ನು ದ. 30ರಂದು ಬೆಳಗ್ಗೆ 10 ಗಂಟೆಗೆ ನಟರಾಜ ವೇದಿಕೆಯಲ್ಲಿ ನಡೆಸಲು ನಿರ್ಧರಿಸಲಾಯಿತು.

Sponsors

Related Articles

Leave a Reply

Your email address will not be published. Required fields are marked *

Back to top button