ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವತಿಯಿಂದ ಕಾರ್ಯಾಗಾರ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ಮೊಬೈಲ್ ಅಪ್ಲಿಕೇಶನ್ ಡೆವೆಲಪ್ಮೆಂಟ್ ‘ ಎಂಬ ವಿಷಯದಲ್ಲಿ ಕಾರ್ಯಾಗಾರವನ್ನು ಜೂ. 4 ರಂದು ಆಯೋಜಿಸಲಾಗಿತ್ತು.
ಅಂತಿಮ ವರ್ಷದ ವಿದ್ಯಾರ್ಥಿಗಳಾದ ಮೊಹಮ್ಮದ್ ನಬೀಲ್ ಮತ್ತು ಅಹ್ಮದ್ ಫಯಾಜ್ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಕ್ಷೇತ್ರದಲ್ಲಿ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಯಿತು.
ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥ ಡಾ. ವೆಂಕಟೇಶ್ ಶಂಕರ್, ವಿಭಾಗದ ಎಲ್ಲಾ ಉಪನ್ಯಾಸಕರು, ಮೂರನೇ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕ್ಷಮಾ ಶೆಟ್ಟಿ ಸ್ವಾಗತಿಸಿದರು. ಫಾತಿಮಾ ನೂಹ ವಂದಿಸಿದರು.

Sponsors

Related Articles

Back to top button