ಪ್ರಾಥಮಿಕ ಮತ್ತು ಪೌಢ ಶಾಲಾ ಸಹಶಿಕ್ಷಕರಿಗಾಗಿ ವಿವಿಧ ಸ್ಪರ್ಧೆಗಳು….

ಬಂಟ್ವಾಳ: ಶಿಕ್ಷಕರು ಸಮಾಜ ಮತ್ತು ಇಲಾಖೆಯ ಹಲವು ಒತ್ತಡಗಳಿಂದಾಗಿ ಸಂಕಷ್ಟದಲ್ಲಿದ್ದಾರೆ. ಸಂಘಟನಾತ್ಮಕವಾಗಿ ಶಿಕ್ಷಕರ ಹಾಗೂ ಶಿಕ್ಷಣದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾಗಿದೆ ಎಂದು ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಹೇಳಿದರು.
ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ , ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಆಶ್ರಯದಲ್ಲಿ ನಂದಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪೌಢ ಶಾಲಾ ಸಹಶಿಕ್ಷಕರಿಗಾಗಿ ಏರ್ಪಡಿಸಲಾದ ವಿವಿಧ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಗೋಪಾಲಕೃಷ್ಣ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿ ಪರಿಸರದ ಜನರಲ್ಲಿ ಶಿಕ್ಷಣ ಸಂಸ್ಥೆಯ ಬಗ್ಗೆ ಪ್ರೀತಿ ಇದ್ದಾಗ ಮಾತ್ರ ಸರಕಾರದ ಅನುದಾನವನ್ನು ಬಳಸಿಕೊಂಡು ಶಾಲೆಯನ್ನು ಅಭಿವೃದ್ಧಿಗೊಳಿಸಬಹುದು ಎಂದರು.
ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ಶರೀಫ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಿಕ್ಷಣ ಸಮನ್ವಯ ಅಧಿಕಾರಿ ರಾಧಾಕೃಷ್ಣ ಭಟ್ ,ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಜತ್ತಪ್ಪ ಗೌಡ , ಚಿತ್ರಕಲಾ ಸಂಘದ ಅಧ್ಯಕ್ಷ ಮುರಳಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಬಿ.ಕೆ.ಭಂಡಾರಿ, ಧನ್‍ರಾಜ್, ಶಂಕರ್, ನಿವೃತ್ತ ಶಿಕ್ಷಕರಾದ ಜಯಾನಂದ ಪೆರಾಜೆ, ಬಿ.ರಾಮಚಂದ್ರ ರಾವ್ ಮೊದಲಾದವರು ಉಪಸ್ಥಿತರಿದ್ದರು.
ತಾಲೂಕು ಶಿಕ್ಷಣ ಸಂಯೋಜಕಿ ಸುಶೀಲ ಸ್ವಾಗತಿಸಿದರು. ಶ್ರೀಕಾಂತ ನಿರೂಪಿಸಿದರು. ಪೌಢ ಶಾಲಾ ಮುಖ್ಯೋಪಾಧ್ಯಾಯ ದೇವದಾಸ್ ವಂದಿಸಿದರು. ಪ್ರಾಥಮಿಕ ಮತ್ತು ಪೌಢ ಶಾಲಾ ಶಿಕ್ಷಕರಿಗೆ ಭಾಷಣ ಸಂಗೀತ ಚಿತ್ರಕಲೆ ವಿಜ್ಞಾನ ಮಾದರಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Sponsors

Related Articles

Leave a Reply

Your email address will not be published. Required fields are marked *

Back to top button