ಬಂಟ್ವಾಳಕ್ಕೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಭೇಟಿ….

ಬಂಟ್ವಾಳ: ಬಂಟ್ವಾಳ ಕಸ್ಬಾ ಗ್ರಾಮದ ಇಬ್ಬರು ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮದ ನಿರ್ದಿಷ್ಟ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದ್ದು, ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಇಂದು ಬಂಟ್ವಾಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೀಲ್ ಡೌನ್ ಪ್ರದೇಶದಲ್ಲಿ ಬಂಟ್ವಾಳ ಪುರಸಭೆ ಹಾಗೂ ತಾಲೂಕು ಆಡಳಿತ ಕೈಗೊಂಡಿರುವ ಕ್ರಮಗಳು, ನಿಯಂತ್ರಿತ ಪ್ರದೇಶದ ಜನರ ಅಗತ್ಯ ವಸ್ತುಗಳ ಪೂರೈಕೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್, ಪುರಸಭಾ ಮುಖ್ಯಾಧಿಕಾರಿ ಲೀಲಾ ಬ್ರಿಟ್ಟೋ ಮೊದಲಾದವರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button