ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ- ಶಿಕ್ಷಕ ರಕ್ಷಕ ಸಂಘದ ಮಹಾಸಭೆ…

ಬಂಟ್ವಾಳ : “ಹೆತ್ತವರು ವಿದ್ಯಾಸಂಸ್ಥೆಯೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡು , ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮುತುವರ್ಜಿ ವಹಿಸುವ ಮೂಲಕ ಸಂಸ್ಥೆಯ ಏಳ್ಗೆಗೆ ಸಹಕರಿಸಬೇಕು” ಎಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಪ್ರಹ್ಲಾದ್ ಜೆ. ಶೆಟ್ಟಿ ಹೇಳಿದರು.
ಅವರು ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಆಡಳಿತಾಧಿಕಾರಿ ಸಿ.ಶ್ರೀಧರ್ “ ವಿದ್ಯಾಸಂಸ್ಥೆಯೊಂದರ ಉನ್ನತಿಯಲ್ಲಿ ಹೆತ್ತವರ ಪಾತ್ರ ಹಿರಿದಾಗಿದೆ. ಸಂಸ್ಥೆಯ ಹಿತದೃಷ್ಟಿಯಿಂದ ನೀಡುವ ಎಲ್ಲಾ ಸಲಹೆಗಳನ್ನು ನಾವು ಸ್ವಾಗತಿಸುತ್ತೇವೆ” ಎಂದರು.
ಪೋಷಕರ ಪರವಾಗಿ ಮಾತನಾಡಿದ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಲಕ್ಷ್ಮೀ “ ಪೋಷಕರು ಹಾಗೂ ಶಿಕ್ಷಕರು ನಾಣ್ಯದ ಎರಡು ಮುಖಗಳಿದ್ದಂತೆ. ಶಾಲೆಯು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಪೋಷಕರು ಪಾಲ್ಗೊಳ್ಳುವ ಮೂಲಕ ಶೈಕ್ಷಣಿಕ ಮುನ್ನಡೆಗೆ ಕಾರಣವಾಗಬೇಕು” ಎಂದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಮಾತನಾಡಿ “ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯಬೇಕು ಎಂಬ ಪ್ರಾಮಾಣಿಕ ಉದ್ದೇಶದಿಂದ ಸ್ಥಾಪಿತಗೊಂಡ ಈ ಸಂಸ್ಥೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಬಹಳ ಸಂತಸ ತಂದಿದೆ” ಎಂದರು.
ಈ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಪಿ.ಎಸ್. ಮೋಹನ್ ಹಾಗೂ ಉಪಾಧ್ಯಕ್ಷೆಯಾಗಿ ಕಸ್ತೂರಿ.ಪಿ.ಶೆಟ್ಟಿ ಆಯ್ಕೆಯಾದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎಸ್.ನಾೈಕ್ , ಕಾರ್ಯದರ್ಶಿಗಳಾದ ಕೊಂಬಿಲ ನಾರಾಯಣ ಶೆಟ್ಟಿ , ಟ್ರಸ್ಟಿ ರೊಟೇರಿಯನ್ ಪುಷ್ಪರಾಜ್ ಹೆಗ್ಡೆ , ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ. ಸಲ್ದಾನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕಾರಿ ಸಮಿತಿಯ ಸದಸ್ಯರಾದ ಪಿ.ಎಸ್. ಮೋಹನ್ ಗತವರ್ಷದ ವರದಿಯನ್ನು ವಾಚಿಸಿದರು. ದೈಹಿಕ.ಶಿ. ಶಿಕ್ಷಕರಾದ ದಿನಕರ್ ಪೂಜಾರಿ ಲೆಕ್ಕಪತ್ರವನ್ನು ಮಂಡಿಸಿದರು. ಕಾರ್ಯಕಾರಿ ಸಮಿತಿಯ ಸದಸ್ಯೆ ಶ್ರೀಮತಿ ಕಸ್ತೂರಿ.ಪಿ.ಶೆಟ್ಟಿ ಸ್ವಾಗತಿಸಿ , ಸಹಶಿಕ್ಷಕಿ ಸುಸ್ಮಿತಾ ರಾವ್ ವಂದಿಸಿದರು. ಸಹಶಿಕ್ಷಕಿ ಲೀಲಾ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button