ಡಿ.30 – ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ YEN QUEST 2022…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ YEN QUEST -2022 ಡಿಸೆಂಬರ್ 30 ರಂದು ಏರ್ಪಡಿಸಲಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆ, ಪ್ರಾಜೆಕ್ಟ್ ಮಾಡೆಲ್, ಫೋಟೋಗ್ರಫಿ, ನಿಧಿ ಶೋಧನೆ, ಕೊಲಾಜ್, ಸುಡೊಕು,ಸೈನ್ಸ್ ರಂಗೋಲಿ, ಚರ್ಚಾ ಸ್ಪರ್ಧೆ, ಸ್ಪಾಟ್ ಪೇಂಟಿಂಗ್ ಮೊದಲಾದ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಮತ್ತು ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ತಿಳಿಸಿದ್ದಾರೆ.

Sponsors

Related Articles

Back to top button