ಮಂಗಳೂರು ಏರ್‌ಪೋರ್ಟ್‌ ನಲ್ಲಿ ಸಜೀವ ಬಾಂಬ್ ಪತ್ತೆ….

ಮಂಗಳೂರು : ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್‌ ಪತ್ತೆಯಾಗಿದ್ದು, ಅದರಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಸಿಸಿ ಟಿವಿ ಪರಿಶೀಲನೆ ವೇಳೆ ಸುಮಾರು 9.45 ರ ವೇಳೆಗೆ ಆಟೋದಲ್ಲಿ ಬಂದಂತಹ ಇಬ್ಬರು ವ್ಯಕ್ತಿಗಳು ಲ್ಯಾಪ್ ಟಾಪ್ ಬ್ಯಾಗ್ ನ್ನು ಅಲ್ಲಿರಿಸಿ ಪರಾರಿಯಾಗಿದ್ದಾರೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿನ ಭದ್ರತಾ ತಪಾಸಣಾ ಗೇಟ್ ಬಳಿ ಬ್ಯಾಗ್ ಪತ್ತೆಯಾಗಿರುವುದನ್ನು ಗಮನಿಸಿದ ಕ್ವಿಕ್ ರಿಯಾಕ್ಷನ್ ಟೀಂ ನವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಅಧಿಕಾರಿಗಳು ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ವಿಮಾನ ನಿಲ್ದಾಣಕ್ಕೆ ಬರುವ ದಾರಿಯನ್ನು ಬದಲಾವಣೆ ಮಾಡಲಾಗಿದೆ.ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Sponsors

Related Articles

Leave a Reply

Your email address will not be published. Required fields are marked *

Back to top button