ಮಂಗಳೂರು ಮ ನ ಪಾ: ಈ ಬಾರಿ ಬಿಜೆಪಿಗೆ ಅಧಿಕಾರ – ಜನಾರ್ಧನ ಪೂಜಾರಿ….
ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಈ ಬಾರಿ ಹಲವು ಮೂಲ ಕಾಂಗ್ರೆಸಿಗರಿಗೆ ಅನ್ಯಾಯವಾಗಿದೆ. ಹಲವರಿಗೆ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಧಾನವಿದೆ. ಹೀಗಾಗಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು.
ಪತ್ರಕರ್ತರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಒಂದು ಶನಿ. ಅವರು ಪಕ್ಷವನ್ನು ನಾಶ ಮಾಡುತ್ತಾರೆ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿ ತಪ್ಪು ಮಾಡಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿಕೆಯ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದ್ದ ಅವರು ‘ಈ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಕುರಿತು ಕಾಂಗ್ರೆಸ್ ನನ್ನಲ್ಲಿ ಯಾವುದೇ ಸಲಹೆ ಕೇಳಿಲ್ಲ. ಅವರು ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಹೇಳಿದ್ದಾರೆ. ನಾನು ಇದರಿಂದ ಬಹಳ ನೊಂದಿದ್ದೇನೆ. ಹರೀಶ್ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು. ಕ್ಷಮೆ ಕೇಳಬೇಕು’ ಎಂದರು.