ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಎಂಸಿಎ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ವಿದ್ಯಾರ್ಥಿಗಳು ಮಂಗಳೂರಿನ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ಮೇಳ ಮೇಧಾ-2024 ಇದರ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಒಟ್ಟು 17 ವಿದ್ಯಾರ್ಥಿಗಳ ಕಾಲೇಜು ತಂಡವು ಭಾಗವಹಿಸಿದ್ದು, ಇದರಲ್ಲಿ 8 ವಿದ್ಯಾರ್ಥಿಗಳು ತಾಂತ್ರಿಕ ವಿಭಾಗದಲ್ಲಿ ಹಾಗೂ 9 ವಿದ್ಯಾರ್ಥಿಗಳು ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಪ್ರಶಸ್ತಿಗಳೊಂದಿಗೆ ಮೇಳದ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕಾಲೇಜಿನ ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್ ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button