ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ವಾರ್ಷಿಕೋತ್ಸವ….
ಬಂಟ್ವಾಳ : ಮೌಲ್ಯಯುತವಾದ ಶಿಕ್ಷಣವು ದೇಶದ ಉನ್ನತಿಗೆ ಪ್ರೇರಕ ಶಕ್ತಿಯಾಗಬಲ್ಲುದು ಶಿಕ್ಷಣವು ಕೇವಲ ಪದವಿಗಳಿಕೆಯ ಉದ್ದೇಶಕ್ಕೆ ಸೀಮಿತವಾಗದೆ ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ವಿನಿಯೋಗವಾಗಬೇಕು ಎಂದು ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇದರ ಪ್ರಾಂಶುಪಾಲರಾದ ಪ್ರೊ. ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಅವರು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಹಿರಿಯ ವಿದ್ಯಾರ್ಥಿ ಡಾ. ನಾರಾಯಣ ಪೈ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಮೃದ್ಧಿಗೊಳಿಸಬಲ್ಲ ಶಿಕ್ಷಣವು ವಿದ್ಯಾರ್ಥಿಗಳಿಗೆ ದೊರೆಯಬೇಕು. ಶಿಕ್ಷಕರು ಹಾಗೂ ಪೋಷಕರು ಮಗುವಿನ ಅಭಿರುಚಿ , ಆಸಕ್ತಿಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದರು.
ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮಾತನಾಡಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ಒದಗಿಸುತ್ತಿರುವ ನಮ್ಮ ಈ ಸಂಸ್ಥೆಯಲ್ಲಿ ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಅವಕಾಶವಿದೆ ಎಂದರು.
ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಬಿ.ಎಸ್ ನಾಯ್ಕ್ ,ಉಪಾಧ್ಯಕ್ಷ ಅಪ್ರಾಯ ಪೈ , ಉಪಾಧ್ಯಕ್ಷೆ ಲಕ್ಷ್ಮೀ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ.ಸಲ್ಡಾನಾ, ವಿದ್ಯಾರ್ಥಿ ನಾಯಕಿ ದೀಪಾಲಿ ಎಂ.ಎಸ್. ಉಪಸ್ಥಿತರಿದ್ದರು.
ಸಂಚಾಲಕ ಜಡ್ತಿಲ ಪ್ರಹಾದ ಶೆಟ್ಟಿ ಸ್ವಾಗತಿಸಿ, ಆಡಳಿತಾಧಿಕಾರಿ ಸಿ.ಶ್ರೀಧರ್ ಪ್ರಸ್ತಾವಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ವಂದಿಸಿದರು. ಸಹ ಶಿಕ್ಷಕಿಯರಾದ ಸುಧಾ ಎನ್.ರಾವ್ , ಜಯಶ್ರೀ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.