ಯುವತಿಯ ಮಾನಭಂಗ ಯತ್ನ: ಆರೋಪಿ ದೋಷಮುಕ್ತ….

ಪುತ್ತೂರು: ಕಳೆದ 4 ವರ್ಷಗಳ ಹಿಂದೆ ಯುವತಿಯೊಬ್ಬರ ಮಾನಭಂಗ ಯತ್ನ ಪ್ರಕರಣದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ಕಳೆದ 29-1-2015ರಂದು ಸಂಜೆ 6.30 ಗಂಟೆಗೆ ಪುತ್ತೂರು ತಾಲೂಕಿನ ಪುಣ್ಚಪ್ಪಾಡಿ ಎಂಬಲ್ಲಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿಯನ್ನು ಬೈಕ್‍ನಲ್ಲಿ ಬಂದ ರಫೀಕ್‍ ಎಂಬಾತ ಮಾನಭಂಗ ನಡೆಸಲು ಪ್ರಯತ್ನಿಸಿರುವುದಾಗಿ ದೂರು ದಾಖಲಾಗಿತ್ತು.
ದೂರು ದಾಖಲಿಸಿಕೊಂಡಿದ್ದ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಿಶನ್ ಜಿ ಮಡಲಗಿ ಅವರು ಆರೋಪಿಯನ್ನು ದೋಷಮುಕ್ತಗೊಳಿಸಿ ಬಿಡುಗಡೆಗೊಳಿಸಿದ್ದಾರೆ. ಆರೋಪಿಯ ಪರವಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ವಾದಿಸಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button