ವಿಮಾನ ನಿಲ್ದಾಣದಲ್ಲಿ ಪೇಸ್ಟ್ ರೂಪದಲ್ಲಿ ಸಾಗಿಸುತ್ತಿದ್ದ 18.47 ಲಕ್ಷ ಮೌಲ್ಯದ ಚಿನ್ನ ವಶ….

ಮಂಗಳೂರು : ದುಬೈನಿಂದ ಮಂಗಳೂರಿಗೆ ಪೇಸ್ಟ್ ರೂಪದಲ್ಲಿ 483.57 ಗ್ರಾಂ ಅಕ್ರಮ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಷಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮ ಚಿನ್ನ ಸಾಗಾಟ ಮಾಡಲಾಗಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ 24 ಕ್ಯಾರೆಟ್ ಪರಿಶುದ್ಧತೆಯ ಸುಮಾರು 18.47 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಆರೋಪಿಯು ಚಿನ್ನವನ್ನು ಪೇಸ್ಟ್ ರೂಪದಲ್ಲಿ 3 ಪ್ಯಾಕೆಟ್‌ಗಳಲ್ಲಿ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು, ಆತನನ್ನು ಕೂಡಲೇ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಯು ತಾನು ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದಾಗಿ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾನೆ.

Sponsors

Related Articles

Leave a Reply

Your email address will not be published. Required fields are marked *

Back to top button