ಶುಕ್ರವಾರ – ದ.ಕ 166 ,ಉಡುಪಿ 245 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಶುಕ್ರವಾರ) ದ.ಕ ಜಿಲ್ಲೆಯಲ್ಲಿ 166 ,ಉಡುಪಿ ಜಿಲ್ಲೆಯಲ್ಲಿ 245 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 166 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6881 ಕ್ಕೆ ಏರಿಕೆಯಾಗಿದೆ.ಇಂದು 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 208 ಕ್ಕೆ ಏರಿಕೆಯಾಗಿದೆ. ಇಂದು 188 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 3369 ಸಕ್ರಿಯ ಪ್ರಕರಣಗಳಿವೆ. 3304 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 245 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿಯಲ್ಲಿ 2292 ಸಕ್ರಿಯ ಕೊರೊನಾ ಕೇಸ್ ಗಳಿವೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 5606 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈವರೆಗೆ 3258 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button