ಶ್ರೀರಾಮ ಪದವಿಪೂರ್ವ ವಿದ್ಯಾಲಯ ಕಲ್ಲಡ್ಕ – ಪ್ರತಿಭಾ ಪುರಸ್ಕಾರ….
ಬಂಟ್ವಾಳ : ಜೀವನ ಶಿಕ್ಷಣವನ್ನು ಕಲಿಸುವ ಶಿಕ್ಷಣ ಸಂಸ್ಥೆ ಸಮಾಜಕ್ಕೆ ಅವಶ್ಯಕ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುತ್ತಾ, ಸಂಸ್ಕಾರಯುತ ಸಮಾಜಕ್ಕಾಗಿ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಸಂಸ್ಕೃತಿಯನ್ನು ಶ್ರೀರಾಮ ವಿದ್ಯಾಸಂಸ್ಥೆಗಳು ಅಳವಡಿಸಿಕೊಂಡಿದೆ ಎಂದು ಉಡುಪಿ ಜಿಲ್ಲೆಯ ನಿವೃತ ದೈಹಿಕ ಶಿಕ್ಷಣ ಅಧಿಕಾರಿ ಸೀತಾನದಿ ವಿಠಲ ಶೆಟ್ಟಿ ಹೇಳಿದರು.
ಇವರು ಜ.3 ರಂದು ನಡೆದ ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2019-20ನೇ ಸಾಲಿನ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪುತ್ತೂರಿನ ನ್ಯಾಯವಾದಿಯಾದ ವಿಜಯಾನಂದ, ವಿದ್ಯಾಕೇಂದ್ರದ ಸಹಸಂಚಾಲಕರಾದ ರಮೇಶ್, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್ ಹಾಗೂ ಶ್ರೀಮತಿ ಮಲ್ಲಿಕಾ ಶೆಟ್ಟಿ ಮತ್ತು ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿಯಾದ ಶ್ರೀಮತಿ ಹರಿಣಿ ಉಪಸ್ಥಿತರಿದ್ದರು.
ಶೈಕ್ಷಣಿಕ, ವಿಜ್ಞಾನ, ಸಂಸ್ಕೃತ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪುರಸ್ಕರಿಸಿದ ವಿದ್ಯಾರ್ಥಿಗಳ ಪಟ್ಟಿಯನ್ನು ಉಪನ್ಯಾಸಕರು ವಾಚಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರಾದ ತಿರುಮಲೇಶ್ವರ ಪ್ರಶಾಂತ್ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಕಿಯಾದ ಶ್ರೀಮತಿ ಜಯಲಕ್ಷ್ಮೀ ಕೆ ನಿರೂಪಿಸಿದರು.