ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ….
ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಡಿ.10 ರಂದು ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ನಡೆಯಿತು.
ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಯವರು ವಹಿಸಿ, ಕ್ರೀಡೆಯಲ್ಲಿ ಸೋಲು ಗೆಲುವು ಇದ್ದದ್ದೆ, ಸ್ಪರ್ಧೆಯು ಆರೋಗ್ಯಕರವಾಗಿರಬೇಕು ಎಂಬ ಮಾತಿನ ಮೂಲಕ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ತಾಲೂಕು ಯುವ ಸಬಲೀಕರಣ ಮತ್ತು ಯುವಜನ ಸೇವಾ ಕ್ರೀಡಾಧಿಕಾರಿ ಜಯರಾಮ ಗೌಡ ರವರು ಕ್ರೀಡಾಜ್ಯೋತಿ ಬೆಳಗಿ, ಕ್ರೀಡಾಕೂಟವನ್ನು ಉದ್ಘಾಟಿಸಿ, ಸ್ವಚ್ಛತೆಯ ಬಗ್ಗೆ ಗಮನಹರಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. 10ನೇ ತರಗತಿ ಭವಿಷ್ ಭಂಡಾರಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರುಗಳಾದ ಬೂಡಿಯಾರ್ ರಾಧಾಕೃಷ್ಣ ರೈ, ಹರಿಣಾಕ್ಷಿ ಜೆ ಶೆಟ್ಟಿ, ಪ್ರೇಮಲತಾ ಜಯರಾಮ್ ರೈ ರವರು ಶುಭ ಹಾರೈಕೆಯ ಮಾತುಗಳನ್ನಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವರ್ಗ ಕ್ರೀಡಾಕೂಟದಲ್ಲಿ ಸಹಕರಿಸಿದರು. ಮುಖ್ಯೋಪಾಧ್ಯಾಯಿನಿ ರೂಪಕಲಾ ಕೆ ಸ್ವಾಗತಿಸಿದರು. ದೈಹಿಕ ಶಿಕ್ಷಕಿಯಾದ ಸುನೀತಾ ಎಂ ವಂದಿಸಿದರು. ಶಿಕ್ಷಕಿ ಪ್ರೀತಾ ಎನ್ ಕಾರ್ಯಕ್ರಮ ನಿರೂಪಿಸಿದರು.