ಸಹ್ಯಾದ್ರಿ 10K ರನ್, ಮಂಗಳೂರು – ಲಾಂಛನ ಬಿಡುಗಡೆ ಸಮಾರಂಭ…

ಮಂಗಳೂರು: ಸ್ವಚ್ಛ – ಪರಿಸರ – ಹಸಿರು – ಉಸಿರು ಮತ್ತು ಆರೋಗ್ಯಕರ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ಇವರು ಫಿಟ್ ಇಂಡಿಯಾ ಥೀಮ್ ಗೆ ಅನುಗುಣವಾಗಿ ‘ಸಹ್ಯಾದ್ರಿ 10K ರನ್, ಮಂಗಳೂರು’ ಮೆಗಾ ಈವೆಂಟ್ ನ್ನು ಆಯೋಜಿಸುತ್ತಿದೆ.
ಭಂಡಾರಿ ಫೌಂಡೇಶನ್, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯ, ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಈ ಕಾರ್ಯಕ್ರಮವು ನಡೆಯಲಿದೆ.
“ಸಹ್ಯಾದ್ರಿ 10K ರನ್, ಮಂಗಳೂರು” ಲಾಂಛನ ಬಿಡುಗಡೆ ಸಮಾರಂಭವು ಡಿಸೆಂಬರ್ 19 ರಂದು ಸಂಜೆ 5.00 ಗಂಟೆಗೆ ಮಂಗಳೂರಿನ ಡಾ.ಟಿ.ಎಂ.ಎ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿದೆ. ಲಾಂಛನವನ್ನು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಬಿಡುಗಡೆ ಮಾಡಲಿದ್ದಾರೆ.
ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕರಿಸಿದ್ದಪ್ಪ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಸ್ ಸಚ್ಚಿದಾನಂದ್, ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಕೆ ಪಿ ಪುರುಷೋತ್ತಮ, ಸಂಗೀತ ನಿರ್ದೇಶಕ ಮತ್ತು ನಟ ಗುರುಕಿರಣ್ ಉಪಸ್ಥಿತರಿರುತ್ತಾರೆ.

Sponsors

Related Articles

Leave a Reply

Your email address will not be published. Required fields are marked *

Back to top button