ಶನಿವಾರ – ದ.ಕ 272 , ಉಡುಪಿ 172 ಹಾಗೂ ರಾಜ್ಯದಲ್ಲಿ 8324 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶನಿವಾರ) ದ.ಕ ಜಿಲ್ಲೆಯಲ್ಲಿ 272 , ಉಡುಪಿ 172 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12109 ಕ್ಕೆ ಏರಿಕೆಯಾಗಿದೆ.ಇಂದು 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 350 ಕ್ಕೆ ಏರಿಕೆಯಾಗಿದೆ. ಇಂದು 236 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2550 ಸಕ್ರಿಯ ಪ್ರಕರಣಗಳಿವೆ. 272 ಪ್ರಕರಣಗಳ ಪೈಕಿ 163 ಪ್ರಕರಣಗಳು ಮಂಗಳೂರಿನಿಂದ, 30 ಪ್ರಕರಣಗಳು ಬಂಟ್ವಾಳದಿಂದ, 33 ಪ್ರಕರಣಗಳು ಪುತ್ತೂರಿನಿಂದ, 23 ಪ್ರಕರಣಗಳು ಸುಳ್ಯದಿಂದ , 11 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 12 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 172 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11259ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2561 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 8324 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,27,076ಕ್ಕೇರಿಕೆಯಾಗಿದೆ. ಇಂದು 115 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,483ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 8110 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು 2,35,128 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 86,446 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 198 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4880 ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button