ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಲಹಾ ಕೇಂದ್ರ…

ಪುತ್ತೂರು: ದ್ವಿತೀಯ ಪಿಯುಸಿ ಮುಗಿಸಿ ವೃತ್ತಿಪರ ಕೋರ್ಸುಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿದ್ದು, ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಲಹಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯ ಕೇಂದ್ರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷವೂ ಪ್ರಕ್ರಿಯೆಯಲ್ಲಿ ಬದಲಾವಣೆಗಳು ನಡೆಯುತ್ತಲೇ ಇರುತ್ತವೆ ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಮಾನಗಳು, ಗೊಂದಲಗಳು ಇರುವುದು ಸಹಜ. ಇದರ ನಿವಾರಣೆಗೆ ಸಲಹಾ ಕೇಂದ್ರವನ್ನು ತೆರೆಯಲಾಗಿದ್ದು ಇಲ್ಲಿಗೆ ಭೇಟಿ ನೀಡಿ ಇದರ ಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು, ಪೋಷಕರು ಪಡೆದುಕೊಳ್ಳಬೇಕೆಂದು ವಿನಂತಿಸಲಾಗಿದೆ.
ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಸೇರುವುದಕ್ಕೆ ಬೇಕಾದ ಮಾರ್ಗದರ್ಶನ, ಸಿಇಟಿಗೆ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಹೊಂದಿಸಬೇಕಾದ ದಾಖಲೆಗಳು ಮುಂತಾದ ವಿಷಯಗಳ ಬಗ್ಗೆ ಉಚಿತವಾಗಿ ಮಾಹಿತಿಯನ್ನು ನೀಡಲಾಗುತ್ತದೆ ಹಾಗೂ ಸಿಇಟಿ ಪ್ರಕ್ರಿಯೆ ಮುಗಿಯುವವರೆಗೂ ನಿರಂತರವಾಗಿ ಸಹಾಯ ಕೇಂದ್ರವು ಕೆಲಸ ಮಾಡುತ್ತದೆ. ಕೋವಿಡ್ ನಿಯಮಾವಳಿಗಳನ್ನು ಸೂಕ್ತವಾಗಿ ಅಳವಡಿಸಿಕೊಂಡು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರ ವರೆಗೆ ಇದು ಕಾರ್ಯನಿರ್ವಹಿಸುತ್ತದೆ ಹಾಗೂ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿರುವ ಸಿಬ್ಬಂದಿಗಳನ್ನೇ ಸಲಹಾ ಕೇಂದ್ರದಲ್ಲಿ ನಿಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ ತಿಳಿಸಿದ್ದಾರೆ.

Sponsors

Related Articles

Back to top button