ಹೈದರಾಬಾದ್ ಪ್ರಿಯಾಂಕ ರೆಡ್ಡಿ, ರೋಜಾ ಅತ್ಯಾಚಾರ ಪ್ರಕರಣಕ್ಕೆ ಖಂಡನೆ – ಪುತ್ತೂರಿನಲ್ಲಿ ಪ್ರತಿಭಟನೆ, ಮನವಿ ಸಲ್ಲಿಕೆ….

ಪುತ್ತೂರು : ಹೈದರಾಬಾದ್‍ನಲ್ಲಿ ಪ್ರಿಯಾಂಕ ರೆಡ್ಡಿ ಮತ್ತು ರೋಜಾ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಪುತ್ತೂರು ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾ ವಾಹಿನಿ ಸಂಘಟನೆಗಳ ವತಿಯಿಂದ ಬುಧವಾರ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದುರ್ಗಾವಾಹಿನಿ ಪ್ರಾಂತ ಸಂಯೋಜಕಿ ವಿದ್ಯಾ ಮಲ್ಯ ಅವರು, ದೇಶದಲ್ಲಿ ನಿರಂತರವಾಗಿ ಮಹಿಳೆಯರ ಮೇಲೆ ಅತ್ಯಾಚಾರ ಘಟನೆಗಳು ಹಾಗೂ ಮಹಿಳೆಯರ ಕೊಲೆ ಪ್ರಕರಣಗಳು ನಡೆಯುತ್ತಿವೆ. ಇದರಿಂದಾಗಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದ್ದು, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ. ಈ ನಿಟ್ಟಿನಲ್ಲಿ ಅತ್ಯಾಚಾರ ಮತ್ತು ಮಹಿಳೆಯರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿ ಕಠಿಣ ಹಾಗೂ ತ್ವರಿತ ಶಿಕ್ಷೆ ಆಗುವ ಕಾನೂನು ತರಬೇಕು ಎಂದು ಆಗ್ರಹಿಸಿದರು.
ಬಳಿಕ ಪ್ರತಿಭಟನಾಕಾರರು ಪುತ್ತೂರು ಉಪವಿಭಾಗಾಧಿಕಾರಿ ಕಛೇರಿಯ ಮೂಲಕ ಈ ಕುರಿತು ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಡಾ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್,ಸೇವಾ ಪ್ರಮುಖ್ ನರಸಿಂಹ ಪೂಂಜಾ,ಜಿಲ್ಲಾ ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ರಾವ್,ದುರ್ಗಾವಾಹಿನಿ ಪ್ರಮುಖ್ ಅರ್ಪಣಾ,ಮೋಹಿನಿ ದಿವಾಕರ್,ಸುಕಿರ್ತಿ,ಪ್ರಭಾ ಆಚಾರ್ಯ,ಜ್ಯೋತಿ ನಾಯಕ್,ಜಯಂತಿ ನಾಯಕ್,ಸುಚೇತ,ಪ್ರೇಮಾ ನಂದಿಲ,ಗೌರಿ ಬನ್ನೂರು, ಬಜರಂಗದಳದ ಜಿಲ್ಲಾ ಸಂಚಾಲಕ ಶ್ರೀಧರ್ ತೆಂಕಿಲ,ವಿಶ್ವ ಹಿಂದೂ ಪರಿಷತ್ ಪ್ರಮುಖ್ ಕೃಷ್ಣ ಪ್ರಸಾದ್ ಬೆಟ್ಟ,ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ್ ಜೀತೆಶ್ ಬಲ್ನಾಡ್,ಪುತ್ತೂರು ಪ್ರಖಂಡ ಸಂಚಾಲಕ ಹರೀಶ್ ಕುಮಾರ್ ದೋಳ್ಪಾಡಿ,ಸುರಕ್ಷಾ ಪ್ರಮುಖ್ ಪ್ರವೀಣ್ ಕಲ್ಲೇಗ, ಮಧುಸೂಧನ್ ಪಡ್ಡಾಯೂರು,ರಂಜಿತ್,ಸುಬ್ರಹ್ಮಣ್ಯ ಕಬಕ,ಚೇತನ್ ಬೊಳ್ವಾರ್,ಸಚಿನ್,ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button