ಮೀನಿನ ಟೆಂಪೋದಲ್ಲಿ ಸಾಗಿಸುತ್ತಿದ್ದ ಗೋ ಮಾಂಸ ವಶ,ಇಬ್ಬರ ಬಂಧನ….

ಮಂಗಳೂರು: ಮೀನಿನ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಭಜರಂಗದಳ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರಿನಿಂದ ಸಂಶಯದ ಮೇರೆಗೆ ಟೆಂಪೋವನ್ನು ಬೆನ್ನಟ್ಟಿದ ಭಜರಂಗದಳ ಕಾರ್ಯಕರ್ತರು ಕಂಕನಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ವೇಳೆ ಟೆಂಪೋ ತಡೆದು ಪರಿಶೀಲಿಸಿದಾಗ 10 ಟನ್ ಗೂ ಅಧಿಕ ಪ್ರಮಾಣದಲ್ಲಿ ಗೋ ಮಾಂಸ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕಂಕನಾಡಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.