ಪಣೋಲಿಬೈಲು – ಅನುವಂಶಿಕ ಸಹ ಅರ್ಚಕ ರಮೇಶ್ ಮೂಲ್ಯ ನಿಧನ…
ಬಂಟ್ವಾಳ: ಪಣೋಲಿಬೈಲು ದೈವಸ್ಥಾನದ ಅನುವಂಶಿಕ ಸಹ ಅರ್ಚಕರಾದ ರಮೇಶ್ ಮೂಲ್ಯ (55) ಅವರು ಇಂದು ನಿಧನರಾಗಿದ್ದಾರೆ.
ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಂಗಳವಾರ ರಾತ್ರಿ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗ್ಗೆ
ಮೃತಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.