ಸರ್ಜಾ ಕುಟುಂಬಕ್ಕೆ ‘ಜೂನಿಯರ್ ಚಿರಂಜೀವಿ’ ಆಗಮನ….

ಬೆಂಗಳೂರು: ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಸರ್ಜಾ ಕುಟುಂಬಕ್ಕೆ ‘ಜೂನಿಯರ್ ಚಿರಂಜೀವಿ’ ಆಗಮಿಸಿದಂತಾಗಿದೆ.
ವಿಶೇಷ ಎಂಬಂತೆ ಚಿರು, ಮೇಘನಾ ನಿಶ್ಚಿತಾರ್ಥದ ದಿನವೇ ‘ಜೂನಿಯರ್ ಚಿರಂಜೀವಿ’ ಆಗಮನ ಸರ್ಜಾ ಕುಟುಂಬಸ್ಥರಲ್ಲಿ ಸಂಭ್ರಮ ಮೂಡಿಸಿದೆ.
ಚಿರಂಜೀವಿ ಸರ್ಜಾ ಜೂನ್ 7 ರಂದು ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಅವರು ಸಾವನ್ನಪ್ಪಿದ ದಿನವೇ ಮೆಘನಾ ರಾಜ್ ಸರ್ಜಾ ಗರ್ಭಿಣಿಯಾಗಿರುವ ಕುರಿತ ಸುದ್ದಿ ಹೊರ ಬಿದ್ದಿತ್ತು. ಅದಾದ ಬಳಿಕ ಅವರು ಮನೆಯಲ್ಲೇ ಕಾಲ ಕಳೆಯುವ ಮೂಲಕ ಕಾಳಜಿ ವಹಿಸಿದ್ದರು. ಈ ವೇಳೆ ಸ್ಯಾಂಡಲ್‍ವುಡ್‍ನ ಹಲವು ನಟ, ನಟಿಯರು ಗಣ್ಯರು ಹಾಗೂ ಸ್ನೇಹಿತರು ಮೇಘನಾ ಅವರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದೀಗ ಮೇಘನಾ ಅವರಿಗೆ ಮಗು ಹುಟ್ಟಿರುವುದರಿಂದ ಇಡೀ ಸ್ಯಾಂಡಲ್‍ವುಡ್‍ನಲ್ಲೇ ಸಂತಸ ಮನೆ ಮಾಡಿದೆ.

 

Sponsors

Related Articles

Leave a Reply

Your email address will not be published. Required fields are marked *

Back to top button