ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ…

ಪುತ್ತೂರು: ಇಲ್ಲಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಯುಧ ಪೂಜೆಯನ್ನು ಆಚರಿಸಲಾಯಿತು.
ಬೆಳಿಗ್ಗೆ ಗಣಪತಿಹವನ, ಸರಸ್ವತಿ ಪೂಜೆಯೊಂದಿಗೆ ವಿವಿಧ ಪ್ರಯೋಗಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್, ಸಂಚಾಲಕ ರಾಧಾಕೃಷ್ಣ ಭಕ್ತ, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ಸುಬ್ರಮಣ್ಯ ಭಟ್.ಟಿ.ಎಸ್, ವಿಶ್ವಾಸ್ ಶೆಣೈ. ರವಿಕೃಷ್ಣ.ಡಿ.ಕಲ್ಲಾಜೆ, ಅಚ್ಯುತ ಪ್ರಭು, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.