ಕಡೇಶಿವಾಲಯ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಯೋಜನೆಗಳ ಲೋಕಾರ್ಪಣೆ …
ಬಂಟ್ವಾಳ: ಪ್ರತಿಯೊಂದು ಮತಗಳು ದೇಶದ ಅಭಿವೃದ್ಧಿ ಗೆ, ಪ್ರಗತಿಗೆ ಪೂರಕವಾಗಿರುತ್ತದೆ ಎಂಬ ದೃಷ್ಟಿಯಿಂದ ಮತ ಚಲಾಯಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು .
ಅವರು ಕಡೇಶಿವಾಲಯ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ಪಡೆಯುವ ಮೂಲಕ ಕಾಂಗ್ರೇಸ್ ಮುಕ್ತ ಕಡೇಶ್ವಾಲ್ಯ ಮಾಡಲು ಕಾರ್ಯಕರ್ತರು ಮತಬೇಧ ಬಿಟ್ಟು ಒಂದಾಗಿ ಎಂದು ಕರೆನೀಡಿದರು.2 ಕೋಟಿ 60 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಕಡೇಶ್ವಾಲ್ಯ ಗ್ರಾಮದಲ್ಲಿ ನಡೆದಿದೆ. ಈ ದಿನ ಸುಮಾರು ೧ ಕೋಟಿ 70 ಲಕ್ಷ ವೆಚ್ಚದ ವಿವಿಧ ಕಾಮಗಾರಿ ಗಳ ಉದ್ಘಾಟನೆ ಮಾಡಲಾಗಿದೆ ಎಂದರು.ಮುಂದಿನ ದಿನಗಳಲ್ಲಿ ರಾಜ್ಯದ ಕಾಮಧೇನು ಬಿ.ಎಸ್.ಯಡಿಯೂರಪ್ಪ ಅವರ ಮುಖಾಂತರ ಈ ಗ್ರಾಮದಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿ ಗಳನ್ನು ಅನುಷ್ಠಾನಕ್ಕೆ ತರುವ ಭರವಸೆ ನೀಡಿದರು.
ದೇಶದ ನಾಯಕತ್ವದ ಬದಲಾವಣೆಯಿಂದ ಮಹತ್ವದ ಬದಲಾವಣೆಗೆ ಕಾರಣವಾಯಿತು.ಪ್ರಧಾನಿ ಮೋದಿಯವರ ನಾಯಕತ್ವದ ಅಡಿಯಲ್ಲಿ ಯಾವುದೇ ಸಮಸ್ಯೆಗಳನ್ನು ಎದುರಿಸಲು ಭಾರತ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿ.ಪಂ.ಸದಸ್ಯರಾದ ಕಮಲಾಕ್ಷಿ , ಅಧ್ಯಕ್ಷ ದೇವಪ್ಪ ಪೂಜಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಗೋಳ್ತಮಜಲು ಶಕ್ತಿಕೇಂದ್ರದ ಅಧ್ಯಕ್ಷ ರಮನಾಥ ರೈ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣಾ ಸಹಪ್ರಭಾರಿ ಪ್ರಭಾಕರ ಪ್ರಭು, ಗ್ರಾ.ಪಂ.ಮಾಜಿ ಅಧ್ಯಕ್ಷೆ ಶ್ಯಾಮಲಾ ಶೆಟ್ಟಿ, ಉಪಾಧ್ಯಕ್ಷ ಸುರೇಂದ್ರ ರಾವ್, ಪಕ್ಷದ ಪ್ರಮುಖರಾದ ವಿದ್ಯಾದರ ರೈ ,ಶಾಂತಪ್ಪ ಪೂಜಾರಿ, ತಿರುಮಲೇಶ್ ಭಟ್, ಸನತ್ ಆಳ್ವ, ಸಂಪತ್ ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ, ಶರತ್ ಕಡೇಶಿವಾಲಯ, ಸುರೇಶ್ ಬನಾರಿ, ಪರುಷೋತ್ತಮ ಶೆಟ್ಟಿ ವಾಮದಪದವು , ಗಣೇಶ್ ರೈ ಮಾಣಿ ಮತ್ತಿತರರು ಉಪಸ್ಥಿತರಿದ್ದರು.