ಯಕ್ಷಗಾನ ರಂಗದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗರು ಇನ್ನಿಲ್ಲ….

ಉಡುಪಿ: ಯಕ್ಷಗಾನ ರಂಗದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ (71) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಯಕ್ಷಗಾನದ ಮೇರು ಕಲಾವಿದರಾಗಿದ್ದ ಮಲ್ಪೆ ರಾಮದಾಸ ಸಾಮಗರ ಪುತ್ರರಾದ ವಾಸುದೇವ ಸಾಮಗ ಕೋಟೇಶ್ವರ ನಿವಾಸಿಯಾಗಿದ್ದು ಧರ್ಮಸ್ಥಳ, ಕದ್ರಿ, ಕರ್ನಾಟಕ ಮೇಳ(ಸುರತ್ಕಲ್), ಸಾಲಿಗ್ರಾಮ ಮೇಳದ ಪ್ರಮುಖ ವೇಷಧಾರಿಯಾಗಿ ಜನ ಮನ ಸೆಳೆದಿದ್ದರು. ಸಂಯಮ ಸಂಸ್ಥೆ ಮೂಲಕ ತಾಳಮದ್ದಳೆಗೆ ಹೊಸ ಆಯಾಮ, ಹೊಸ ಶಿಸ್ತು ನೀಡಿದ್ದರು.

ಮಲ್ಪೆ ವಾಸುದೇವ ಸಾಮಗರು ಪತ್ನಿ ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ. ಮೂಲಗಳ ಪ್ರಕಾರ ಕೋವಿಡ್‌ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಾಮಗರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗಿನ ಜಾವ 3 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Download 3 Download 2 300x164 Download 1

Related Articles

Leave a Reply

Your email address will not be published. Required fields are marked *