ಅರ್ಚಕರಿಗೆ ದಿನ ಬಳಕೆಯ ವಸ್ತುಗಳ ಕಿಟ್ ವಿತರಣೆ…

ಬಂಟ್ವಾಳ: ಕರ್ನಾಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ಇಸ್ಕಾನ್ ಅಕ್ಷಯ ಪಾತ್ರೆ ಯೋಜನೆ ಮಂಗಳೂರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ದ.ಕ. ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನ ಬಳಕೆಯ ವಸ್ತುಗಳ ಕಿಟ್ ನ್ನು ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಅರ್ಚಕರಿಗೆ ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ನಿರ್ದೇಶಕ ಎo ಸುಬ್ರಹ್ಮಣ್ಯ ಭಟ್ ವಿತರಿಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ಜಿಲ್ಲಾ ಅಧ್ಯಕ್ಷ ವೇದಮೂರ್ತಿ ಪೊಳಲಿ ಕೃಷ್ಣರಾಜ ಭಟ್ ಉಪಸ್ಥಿತರಿದ್ದರು.