ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎo ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ….
ಬಂಟ್ವಾಳ: ಈ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಮಾಜಿಕ -ಧಾರ್ಮಿಕ- ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಎo ಸುಬ್ರಹ್ಮಣ್ಯ ಭಟ್ ಇವರಿಗೆ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ ನಂದಾವರ ಇಲ್ಲಿ 40ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥೆ ಹತ್ತನೇ ಉದ್ಯಾಪನ ಧಾರ್ಮಿಕ ಸಮಾರಂಭದಲ್ಲಿ ನೆನಪಿನ ಕಾಣಿಕೆ ಫಲಪುಷ್ಪಗಳನ್ನಿತ್ತು, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕ ಮಹೇಶ್ ಭಟ್, ಅಖಿಲ ಕರ್ನಾಟಕ ಬ್ರಾಹ್ಮಣ ಪುರೋಹಿತ ಮತ್ತು ಅರ್ಚಕ ಪರಿಷತ್ತಿನ ಅಧ್ಯಕ್ಷ ವೇದಮೂರ್ತಿ ಶಿವರಾಮ ಮಯ್ಯ, ಅಖಿಲ ಕರ್ನಾಟಕ ಬ್ರಾಹ್ಮಣ ಪರಿಷತ್ತು ಜಿಲ್ಲಾ ಅಧ್ಯಕ್ಷ ವೇದಮೂರ್ತಿ ಪಿ ಕೃಷ್ಣರಾಜ ಭಟ್, ಸಜಿಪನಡು ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಬಿ ಕೆ ರಾಜ, ಯುವಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.