ಸೋಮವಾರ – ದ.ಕ 50 ಹಾಗೂ ರಾಜ್ಯದಲ್ಲಿ 1157 ಕೊರೊನ ಪಾಸಿಟಿವ್ ಪತ್ತೆ…
ಮಂಗಳೂರು: ಇಂದು (ಸೋಮವಾರ ) ದ.ಕ ಜಿಲ್ಲೆಯಲ್ಲಿ 50 ಹಾಗೂ ರಾಜ್ಯದಲ್ಲಿ 1157 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 50 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31309 ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಒಟ್ಟು 696 ಮಂದಿ ಬಲಿಯಾಗಿದ್ದಾರೆ.ಇಂದು 71 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1157 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,62,804ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,541ಕ್ಕೆ ಏರಿಕೆಯಾಗಿದೆ. ಇಂದು 2,188 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 8,25,141ಕ್ಕೆ ಏರಿಕೆಯಾಗಿದೆ. 26,103 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.