ಕುಡಿಯುವ ನೀರಿನ ಯೋಜನೆ – ನೀರಿನ ಟ್ಯಾಂಕ್ ಗೆ ಶಿಲಾನ್ಯಾಸ…
ಬಂಟ್ವಾಳ: ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಕೊಡಾಜೆ -ಕಲ್ಲೋಲ್ಲಿಗುಡ್ಡೆ ಪ್ರದೇಶಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಈ ಭಾಗದ ಜಿಲ್ಲಾ ಪಂಚಾಯತ್ ಸದಸ್ಯರ ಅನುದಾನ, ಹಾಗೂ ತಾಲೂಕು ಪಂಚಾಯತ್ ಸದಸ್ಯರ ಮತ್ತು ಗ್ರಾಮ ಪಂಚಾಯತ್ ಸದಸ್ಯರ ಅನುದಾನದಿಂದ ಸುಮಾರು ಒಟ್ಟು ರೂ.6.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ನೀರಿನ ಟ್ಯಾಂಕ್ ಗೆ ಶಿಲಾನ್ಯಾಸವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ನೆರೆವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಶ್ರೀಮತಿ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಕುಶಲ ಪೆರಾಜೆ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಂಚಾಯತ್ ಸದಸ್ಯರಾದ ಇಬ್ರಾಹಿಂ ಕೆ ಮಾಣಿ, ರಮಣಿ ಡಿ ಪೂಜಾರಿ,ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರೀತಿ ಡಿನ್ನಾ ಪಿರೇರಾ,ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ, ಪ್ರಮುಖರಾದ ಶಿವರಾಮ ಶೆಟ್ಟಿ, ವಿಶ್ವನಾಥ ಶೆಟ್ಟಿ, ಹಸ್ಸಾಯಿನಾರ್, ಇಸ್ಮಾಯಿಲ್, ಸತೀಶ್ ಬೈಲ ಮೊದಲಾದವರು ಉಪಸ್ಥಿತರಿದ್ದರು.