ಕೊಡಗು- ಕರಾವಳಿಯಲ್ಲಿ ಧಾರಾಕಾರ ಮಳೆ……

ಕಳೆದ ಕೆಲವು ದಿನಗಳಿಂದ ಕೊಡಗು- ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಒಂದೇ ಸವನೆ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲ ನದಿ-ಕೊಳ್ಳಗಳು ತುಂಬಿವೆ. ನಗರ ಪ್ರದೇಶಗಳ ತಗ್ಗು ಪ್ರದೇಶಗಳಲ್ಲೂ ನೀರು ತುಂಬಿದೆ. ರಾಜ ಕಾಲುವೆಗಳು ತುಂಬಿ, ಡ್ರೈನೇಜ್‌ ಉಕ್ಕಿ ಕೃತಕ ನೆರೆ ಉಂಟಾಗುವುದು ಸರ್ವೇ ಸಾಮಾನ್ಯವಾಗಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಮುಂದುವರಿಯಲಿದೆ.

Sponsors

Related Articles

Leave a Reply

Your email address will not be published. Required fields are marked *

Back to top button