ದ.ಕ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ.ಬಿ. ರೂಪೇಶ್…….
ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅವರನ್ನು ಸರಕಾರ ನೇಮಕ ಮಾಡಿದೆ. ಸಿಂಧೂ.ಬಿ. ರೂಪೇಶ್ ಅವರು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ಪದೊನ್ನತ್ತಿಗೊಳಿಸಿ ಸರಕಾರ ಆದೇಶ ನೀಡಿದೆ.ಈ ಹಿಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಯಿಂದ ಖಾಲಿಯಾಗಿದ್ದ ಸ್ಥಾನಕ್ಕೆ ಸಿಂಧೂ ಅವರನ್ನು ನೇಮಕ ಮಾಡಲಾಗಿದೆ. ಮೈಸೂರಿನ NIE ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರುವ ಸಿಂಧೂ ಅವರು 2011ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದಾರೆ. ಸಿಂಧೂ ಅವರು 2011ನೇ ಬ್ಯಾಚಿನ ಐಎಎಸ್ ನಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗಿರುತ್ತಾರೆ.